ಮಂಗಳೂರು| ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ ‘ಶಕ್ತಿ’ ಯೋಜನೆಗೆ ಚಾಲನೆ

0
343

ಸನ್ಮಾರ್ಗ ವಾರ್ತೆ

ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಯೋಜನೆ ‘ಶಕ್ತಿ’ಗೆ ಮಂಗಳೂರು ನಗರದ ಬಿಜೈ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವರೂ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನ ಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗದ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.