ಮಂಗಳೂರು: ವ್ಯಕ್ತಿಯನ್ನು ಚೂರಿಯಿಂದ ಇರಿದು ಕೊಲೆ

0
200

ಸನ್ಮಾರ್ಗ ವಾರ್ತೆ

ಮಂಗಳೂರು: ವ್ಯಕ್ತಿಯನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಸಂಜೆ ನಡೆದಿದೆ. ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್‌ನಲ್ಲಿ ಕೆಲಸಕ್ಕಿದ್ದ ಅತ್ತಾವರ ಮೂಲದ ರಾಘವ ಆಚಾರಿ ಎಂಬುವವರನ್ನು ಕೊಲೆ ಮಾಡಲಾಗಿದೆ.

ವ್ಯಕ್ತಿಯೊಬ್ಬ ಅಂಗಡಿಗೆ ಪ್ರವೇಶಿಸಿ ರಾಘವ ಆಚಾರಿಗೆ ಚೂರಿಯಿಂದ ಇರಿದಿದ್ದು, ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೊಲೆ ಕೃತ್ಯವು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.