ಮುಲ್ಕಿ: ಟಯರ್ ಸ್ಫೋಟಗೊಂಡು ಮಗುಚಿದ ಟೈಲ್ಸ್ ಸಾಗಾಟ ವಾಹನ: ಕಾರ್ಮಿಕರಿಗೆ ಗಾಯ

0
341

ಸನ್ಮಾರ್ಗ ವಾರ್ತೆ

ಮಂಗಳೂರು: ಮಂಗಳೂರಿನಿಂದ ಉಡುಪಿಗೆ ಟೈಲ್ಸ್ ಸಾಗಾಟ ಮಾಡುತ್ತಿದ್ದ ವಾಹನದ ಟಯರ್ ಸ್ಫೋಟಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾ.ಹೆ.‌ 66ರ ಮುಲ್ಕಿ ಸೇತುವೆ ಸಮೀಪದಲ್ಲಿ ನಡೆದಿದೆ.

ಮಿನಿ ಲಾರಿಯಲ್ಲಿದ್ದ ಗಾಯಾಳುಗಳನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ‌.

ಮಂಗಳೂರಿನಿಂದ ಉಡುಪಿಗೆ ಟೈಲ್ಸ್ ಸಾಗಿಸುತ್ತಿದ್ದ‌ ಈ ವಾಹನದಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಮುಲ್ಕಿ ಸೇತುವೆ ಸಮೀಪದಲ್ಲಿ ಹಿಂಬದಿಯ ಟಯರ್ ಸ್ಫೋಟಗೊಂಡ ಪರಿಣಾಮವಾಗಿ ರಸ್ತೆ ಡಿವೈಡರ್ ಮೇಲೆ ಮಗುಚಿ ಬಿದ್ದಿದೆ.
ಈ ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ. ಓರ್ವನ ತಲೆಗೆ ಗಂಭೀರವಾದ ಗಾಯವಾಗಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು ಮುಂದಿನ ಕ್ರಮ ಕೈಗೊಂಡರು.