ಬೆಂಗಳೂರು: ಪಟಾಕಿ ಸಿಡಿದು ಹಲವು ಮಕ್ಕಳ ಕಣ್ಣಿಗೆ ಗಾಯ

0
404

ಸನ್ಮಾರ್ಗ ವಾರ್ತೆ

ಬೆಂಗಳೂರು: ಪಟಾಕಿ ಸಿಡಿದು ನಿನ್ನೆ ಒಂದೇ ದಿನ 11 ಮಕ್ಕಳ ಕಣ್ಣಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಈವರೆಗೆ 15 ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 9 ಜನರಿಗೆ ಚಿಕಿತ್ಸೆ ನೀಡಲಾಗಿದೆ.

ದೀಪಾವಳಿ ಬಳಿಕವೂ ಪಟಾಕಿ ದುರಂತಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸಣ್ಣ ಮಕ್ಕಳಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ಬಗ್ಗೆ ತಿಳಿದುಬಂದಿದೆ. 6 ರಿಂದ 16 ವರ್ಷದ ಮಕ್ಕಳ ಕಣ್ಣುಗಳಿಗೆ ಪಟಾಕಿಯಿಂದಾಗಿ ಅತಿ ಹೆಚ್ಚು ಹಾನಿ ಉಂಟಾಗಿದೆ. ನಿನ್ನೆ ಒಂದೇ ದಿನ 11 ಪ್ರಕರಣಗಳು ದಾಖಲಾಗಿವೆ.