ಬೆಂಗಳೂರು: ರೈತರ ಹೋರಾಟವನ್ನು ಬೆಂಬಲಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ(WPI) ವತಿಯಿಂದ ಬೃಹತ್ ಪ್ರತಿಭಟನೆ

0
565

ಸನ್ಮಾರ್ಗ ವಾರ್ತೆ

ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ ನಡೆಸಿದೆ. ಇಂದು ಶಿವಾಜಿನಗರ ಪಕ್ಷದ ಕಚೇರಿ ಬಳಿಯಲ್ಲಿ ಪಕ್ಷದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಕೃಷಿ ಮಸೂದೆ ಕಾಯ್ದೆ ವಿರೋಧಿಸಿ ಘೋಷಣೆ ಕೂಗಿದರು.

ದೇಶದ ಕೃಷಿ ವಲಯವು ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಇಂದು ರೈತರು ಬೆಳೆದ ಬೆಳೆಗಳಿಗೆ ಸೂಕ್ತ ನಿಗದಿತ ಬೆಲೆ ಮತ್ತು ಮಾರುಕಟ್ಟೆ ಇಲ್ಲ. ನೀರಾವರಿ ಸೌಲಭ್ಯ, ಬೀತ್ತನೆ ಬೀಜ, ರಸಗೋಬ್ಬರ್, ವಿದ್ಯುತ್ ಪೂರೈಕೆ, ದಾಸ್ತಾನು ಕೊಠಡಿ, ಸಾಲ ಸೌಲಭ್ಯ, ತಂತ್ರಜ್ಞಾನಗಳು ಸರಿಯಾಗಿ ಸಿಗದ ಪರಿಣಾಮ ರೈತ ಆತ್ಮಹತ್ಯಗೆ ಶರಣಾಗುತ್ತಿದ್ದಾನೆ. ಅಸಂಖ್ಯಾತ ರೈತ ಮತ್ತು ಕೃಷಿ ಕೂಲಿಕಾರರು ಕೃಷಿಯಿಂದ ದೂರವಾಗಿ ಹೊಟ್ಟೆಪಾಡಿಗಾಗಿ ಹಳ್ಳಿಯಿಂದ ನಗರಗಳಿಗೆ ವಲಸೆ ಹೋರಡುತ್ತಿದ್ದಾರೆ ಇದರ ಬಗ್ಗೆ ಗಮನ ಹರಿಸಬೇಕಾದ ನಮ್ಮ ಸರ್ಕಾರಗಳು ತಮ್ಮ ಜವಾಬ್ದಾರಿಯನ್ನು ಮರೆತಿವೆ ಎಂದು ಅವರು ಹಬೀಬುಲ್ಲಾ ಖಾನ್ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಟೀಕಿಸಿದರು.

ಬಿಜೆಪಿ ನೆತ್ರತ್ವದ ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳು ಮೂರುಮಹತ್ವದ ರೈತ ನತ್ತು ಜನವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲು ಹೋರಟಿದೆ. ಈ ಕಾತಿದೆಗಳು ಜಾರಿಯಾದರೆ ದೇಶದ ಕೃಷಿ ದಿವಾಳಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.ತಿದ್ದು ಪಡಿಗೆ ಒಳಗಾದ ಮೂರು ಕಾಯ್ದೆಗಳಾದ ಭೂ ಸುಧಾರಣಾ ತಿದ್ದು ಪಡಿ ಕಾಯ್ದೆ ಕೃಷಿ ಉತ್ಪನ್ನ ಮತ್ತು ಸರಕು ಸೇವೆಗಳ ಮಾರಾಟ ಕಾಯಿದೆ (ಎಪಿಎಂಸಿ) ಮತ್ತು ವಿದ್ಯುಚ್ಚಕ್ತಿ ತಿದ್ದು ಪಡಿ ಕಾಯಿದೆಗಳು ರೈತರಿಗೆ ಮಾರಕವಾಗಿ ಕೃಷಿಯನ್ನು ನಾಶಗೊಳಿಸಿ ಅಂಬಾನಿ, ಅದಾನಿ ಸೇರಿದಂತೆ ಇತರ ಕಾರ್ಪೋರೇಟ್ ಸಂಸ್ಥೆಗಳ ಮುಖ್ಯಸ್ಥರಿಗೆ ಕೃಷಿಯನ್ನು ಒಪ್ಪಿಸಲಿದೆ. ಕಾರ್ಪೋರೆಟ್ ಮತ್ತು ಬಂಡವಾಳ ಶಾಹಿಗಳ ಪರ ಇರುವ ರೈತ ಮತ್ತು ಜನ ವಿರೋಧಿ ಮೋದಿ ನೇತ್ರತ್ವದ ಭಾಜಪಾ ಸರ್ಕಾರ ಬಂಡವಾಳಶಾಹಿಗಳ ಹಿತ ಕಾಯಲು ಮುಂದಾಗಿದೆ.

ಇಂತಹ ಸೂಕ್ಷ್ಮತೆಯನ್ನು ಅರಿತುಕೊಂಡು ನಾವುಗಳು ಅನ್ನಧಾತರ ಜೋತೆಗೆ ನಿಲ್ಲಬೇಕಿದೆ ಹಾಗೂ ರೈತ, ಕಾರ್ಮಿಕ, ದಲಿತ, ಅಲ್ಪಸಂಖ್ಯಾತ, ಮಹಿಳಾ ಮತ್ತು ಜನವಿರೋಧಿ ಸರ್ಕಾರಕ್ಕೆ ತಕ್ಕದಾದ ಪಾಠ ಕಲಿಸಿ ದೇಶವನ್ನು ಉಳಿಸಿಕೋಳ್ಳಬೇಕಿದೆ ಎಂದು ಅವರು ತಿಳಿಸಿದರು.

ರೈತರ ಜೊತೆಗೆ ನಿಲ್ಲುವುದೆಂದರೆ ದೇಶದ ಜೊತೆಗೆ ನಿಂತಂತೆ ನಾವು ರೈತರೊಂದಿಗೆ ನಿಲ್ಲೋಣ ದೆಹಲಿಯಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ, ಸೇರಿ ದೇಶದ ಇತರೆ ರಾಜ್ಯಗಳ ರೈತರು ಮಾಡಿತ್ತಿರುವ ಹೋರಾಟವು ದೇಶದ ಉಳಿವಿಗಾಗಿ ಮತ್ತು ಆಹಾರ ಭದ್ರತೆಗಾಗಿ ಮಾಡುತ್ತಿರುವ ಹೋರಾಟವಾಗಿದೆ ಎಂದು ಅವರು ತಿಳಿಸಿದರು.

‘ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳ ಜಾರಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದು ರೈತರ ಹೋರಾಟಕ್ಕೆ ಜಯವಾಗಿದೆ.ಆದರೆ, ತಜ್ಞರ ಸಮಿತಿ ರಚಿಸಿರುವುದು ಕುರಿಯನ್ನು ಕಾಯಲು ತೋಳವನ್ನು ಕಾವಲಿಗೆ ಇಟ್ಟಂತೆ ಆಗಿದೆ. ಆದ್ದರಿಂದ ಈ ಸಮಿತಿಯನ್ನು ರದ್ದುಗೊಳಿಸಿ ರೈತ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಿ ವರದಿ ಪಡೆಯಬೇಕು’ ಎಂದು ಅವರು ವೆಲ್ಫೇರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಅಕ್ಬರ್ ಅಲಿ ಉಡುಪಿ ಆಗ್ರಹಿಸಿದರು.

ಸಮಿತಿಯಲ್ಲಿರುವ ತಜ್ಞರು ಸರ್ಕಾರದ ‌ಕಾನೂನುಗಳನ್ನು ರಚಿಸುವಲ್ಲಿ ಹಾಗೂ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದವರೇ ಇದ್ದಾರೆ. ಇವರಿಂದಾಗಿ ರೈತರ ಒತ್ತಾಯಗಳ ಬಗ್ಗೆ ನಿಷ್ಪಕ್ಷಪಾತ ವರದಿ ತಯಾರಿಸುವುದು ಸಾಧ್ಯವಿಲ್ಲ. ಪರಿಣಿತರು ಹಾಗೂ ಹೋರಾಟ ನಿರತ ರೈತ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ಮುಕ್ತ ಮಾರುಕಟ್ಟೆಯಿಂದ ರೈತರ ಆತ್ಮಹತ್ಯೆ ತಡೆಯಬಹುದು ಎಂದು ಸರ್ಕಾರ ಹೇಳುತ್ತದೆ. ಆದರೆ ಎಪಿಎಂಸಿ ವ್ಯವಸ್ಥೆಯಲ್ಲಿ ಖಾಸಗಿಯವರು ಪ್ರವೇಶಿಸಿದರೆ ಅವರು ಮನಸ್ಸಿಗೆ ಬಂದ ಖರೀದಿ ಮತ್ತು ಮಾರಾಟ ದರ ನಿಗದಿಗೊಳಿಸುವರು ಎಂದು ಹೇಳಿದರು.ಪ್ರಮುಖ ಮಸೂದೆಗಳನ್ನು ತರುವಾಗ ಸದನದ ಜತೆಗೆ ಹೊರಗೂ ಚರ್ಚೆ ಆಗಬೇಕು. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ವಿಶ್ವಾಸವನ್ನೇ ಮಾಡಲಿಲ್ಲ ಎಂದರು.

ರೈತರಿಗೆ ಬೆಂಬಲವಾಗಿ ನಿಲ್ಲಬೇಕು ಎನ್ನುವ ಉದ್ದೇಶ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಎಂದಿಗೂ ಇದೆ. ಆದ್ದರಿಂದ ಇಡೀ ಕರ್ನಾಟಕದಲ್ಲಿ ಎಲ್ಲ ಕಡೆ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ತಲತ್ ಯಾಸ್ಮಿನ್, ಬೆಂಗಳೂರು ಉತ್ತರ ಅಧ್ಯಕ್ಷರು ಆಸಿಫ್, ಬೆಂಗಳೂರು ದಕ್ಷಿಣ ಅಧ್ಯಕ್ಷರು ಸೈಯದ್, ಫಝಲ್, ಇರ್ಫಾನ್, ಎಂ.ಡಿ.ರಫೀಕ್ ಇನ್ನಿತರರು ಉಪಸ್ಥಿತರಿದ್ದರು.