ಖಾಸಗಿ ಶಾಲೆಗಳ ಬಗ್ಗೆ ನೀಡಿದ ಹೇಳಿಕೆಯನ್ನು ಮರುಪರಿಶೀಲಿಸಲು ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ

0
338

ಸನ್ಮಾರ್ಗ ವಾರ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಮಾಧ್ಯಮದಲ್ಲಿ ಖಾಸಗಿ ಶಾಲೆಗಳ ಬಗ್ಗೆ ನೀಡಿದ ಹೇಳಿಕೆಯನ್ನು ಮರುಪರಿಶೀಲಿಸಬೇಕು ಎಂದು ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ವತಿಯಿಂದ ಮನವಿ ನೀಡಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ ತಿಳಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಸಮಸ್ಯೆ ಪರಿಗಣಿಸುವುದಾಗಿ ಹೇಳಿದರು. ಈ ಸಂದರ್ಭ ದ.ಕ ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕೋಶಾಧಿಕಾರಿ ಸೀತಾರಾಮ ರೈ ಸವಣೂರು, ಉಪಾಧ್ಯಕ್ಷರಾದ ಮುಸಬ್ಬ. ಪಿ. ಬ್ಯಾರಿ, ಕಾರ್ಯದರ್ಶಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಜೊತೆ ಕಾರ್ಯದರ್ಶಿ ಜಯಸೂರ್ಯ ರೈ, ಅಶ್ವಿನ್ ಶೆಟ್ಟಿ ಉಪಸ್ಥಿತರಿದ್ದರು.