ಅಲ್ಪಸಂಖ್ಯಾತರ ವಿವಿಧ ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಆಹ್ವಾನ

0
1614

ಮಂಗಳೂರು: ಕೇಂದ್ರ ಮತ್ತು ರಾಜ್ಯ ಅಲ್ಪಸಂಖ್ಯಾತ ಇಲಾಖೆಯು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿ ಗಳಿಂದ ವಿವಿಧ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ.

1 ರಿಂದ 10ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಿಮೆಟ್ರಿಕ್, ಪಿಯುಸಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಪೋಸ್ಟ್ ಮೆಟ್ರಿಕ್, ವೃತ್ತಿಪರ ವಿದ್ಯಾರ್ಥಿಗಳಿಗೆ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಗಳಿಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ.

9ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ಹೆಣ್ಮಕ್ಕಳಿಗೆ ಮಾತ್ರ ಬೇಗಂ ಹಝ್ರತ್ ಮಹಲ್ ನ್ಯಾಷನಲ್ ಸ್ಕಾಲರ್ ಶಿಪ್‍ಗೆ (ಮೌಲಾನಾ ಆಝಾದ್) ಆನ್‍ಲೈನ್ ಮೂಲಕ ಅರ್ಜಿಯನ್ನು ಸೆ. 15 ರೊಳಗೆ ಸಲ್ಲಿಸ ತಕ್ಕದ್ದು.

ಎಸ್ಎಸ್ ಎಲ್ ಸಿ ಶೇ. 95% ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ಹಾಗೂ ಪಿಯುಸಿಯಲ್ಲಿ ಶೇ. 90 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ 20 ಸಾವಿರ ರೂ. ಪ್ರೋತ್ಸಾಹ ಧನ ಸಿಗಲಿದ್ದು, ಆನ್‍ಲೈನ್ ಅರ್ಜಿಯನ್ನು ಸಲ್ಲಿಸಲು ಆ. 5 ಕೊನೆಯ ದಿನ.

ಎಲ್ಲಾ ಪದವಿ, ಸ್ನಾತಕೋತ್ತರ, ವೃತ್ತಿಪರ ಹಾಗೂ ಮೂರು ವರ್ಷಗಳ ಡಿಪ್ಲೋಮ ಕಲಿಯುವವರಿಗೆ ಅರಿವು ಶೈಕ್ಷಣಿಕ ಸಾಲ ಸೌಲಭ್ಯವಿದ್ದು ಅರ್ಜಿಯನ್ನು
ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ.ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್, ಶುಲ್ಕ ಪಾವತಿಯ ರಶೀದಿ ಮೊದಲಾದ ದಾಖಲೆಗಳು ಅತ್ಯಗತ್ಯವಾಗಿರುತ್ತವೆ.

ಬೇಗಂ ಹಝ್ರತ್ ಮಹಲ್ ನ್ಯಾಶನಲ್ ಸ್ಕಾಲರ್ ಶಿಪ್‍ (ಮೌಲಾನಾ ಆಝಾದ್) ವಿದ್ಯಾರ್ಥಿ ವೇತನಕ್ಕೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಇಂಗ್ಲಿಷ್‍ನಲ್ಲಿ ಸಲ್ಲಿಸತಕ್ಕದ್ದು ಹಾಗೂ ಶಾಲಾ ಕಾಲೇಜಿನ ಡೈಸ್ ಕೋಡ್ ಮತ್ತು ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕಾಗಿರುವುದರಿಂದ ಈ ಮಾಹಿತಿಯನ್ನು ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.
ಅಲ್ಲದೆ ಖಾಸಗಿ ಸಂಸ್ಥೆಯಾದ ಜಿಂದಾಲ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಪಿಯುಸಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಕಚೇರಿಯಲ್ಲಿ ಉಚಿತವಾಗಿ ಆನ್‍ಲೈನ್ ಸೇವೆ ಲಭ್ಯವಿದೆ.
ಹೆಚ್ಚಿನ ಮಾಹಿತಿಗೆ:
ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ವಿಶ್ವಾಸ್ ಕ್ರೌನ್, ಕಂಕನಾಡಿ, ಮಂಗಳೂರು. ದೂರ.ಸಂ: 0824-4267883 ಅನ್ನು ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷ ರಿಯಾಝ್ ಕಣ್ಣೂರು ಪ್ರಕಟನೆಯಲ್ಲಿ ವಿನಂತಿಸಿದ್ದಾರೆ