ಸನ್ಮಾರ್ಗ ವಾರ್ತೆ
ಮಾನ್ಯ @JPNadda ಅವರೇ,
ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ನಾವು ಕೊಡುತ್ತೇವೆ. ಇದನ್ನೆಲ್ಲ ನೀವು ಮರೆತಿರಬಹುದು, ಆದರೆ “ಇಂಡಿಯಾ” ಮರೆತಿಲ್ಲ ಎಂದು ಸಿದ್ದರಾಮಯ್ಯ X ನಲ್ಲಿ ಹೇಳಿಕೆ ನೀಡಿದ್ದಾರೆ.
ದೇಶದ ಪ್ರಧಾನಮಂತ್ರಿ ಸನ್ಮಾನ್ಯ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ನಡೆಸದೆ ದೇಶದ ಎಲ್ಲ ಪತ್ರಕರ್ತರನ್ನು ಬಹಿಷ್ಕರಿಸಿರುವಾಗ ಒಂದು ಪಕ್ಷದ ತುತ್ತೂರಿಯಂತೆ ಕಾರ್ಯನಿರ್ವಹಿಸುತ್ತಾ ಮಾಧ್ಯಮ ಧರ್ಮಕ್ಕೆ ದ್ರೋಹ ಬಗೆಯುತ್ತಿರುವ 14 ಪತ್ರಕರ್ತರ ಮೇಲೆ ಬಹಿಷ್ಕಾರ ಹೇರಿದ್ದನ್ನು ಪ್ರಶ್ನಿಸುವ ಯಾವ ನೈತಿಕತೆ ನಿಮಗಿದೆ ಎಂದವರು ಪ್ರಶ್ನಿಸಿದ್ದಾರೆ.
ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು:
•ಸಿದ್ದಿಕ್ ಕಪ್ಪನ್
•ಮೊಹಮ್ಮದ್ ಝುಬೇರ್
•ಅಜಿತ್ ಓಝಾ
•ಜಸ್ಪಾಲ್ ಸಿಂಘ್
•ಸಜದ್ ಗುಲ್
ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು:
•ರಾಕೇಶ್ ಸಿಂಗ್ ಉತ್ತರ ಪ್ರದೇಶ, ಸರ್ಕಾರಿ ನಿಧಿ ಅವ್ಯವಹಾರ ಕುರಿತು ವರದಿ
•ಶುಭಂ ಮಣಿ ತ್ರಿಪಾಠಿ, ಉತ್ತರ ಪ್ರದೇಶ, ಮರಳು ದಂಧೆ ಕುರಿತು ವರದಿ
•ಜಿ ಮೋಸೆಸ್, ತಮಿಳುನಾಡು, ಗೋಮಾಳ ಅಕ್ರಮ ಮಾರಾಟ ಕುರಿತು ವರದಿ
•ಪರಾಗ್ ಭುಯಾನ್, ಅಸ್ಸಾಮ್, ಎಸ್ಐನೇಮಕಾತಿ ಹಗರಣ ಕುರಿತು ವರದಿ
•ಗೌರಿ ಲಂಕೇಶ್, ಕೋಮುವಾದ ವಿರೋಧಿಸಿದ್ದಕ್ಕೆ
ಪತ್ರಿಕಾ ಸ್ವಾತಂತ್ಯ್ರ: ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ..!!
2015 – 136ನೇ ಸ್ಥಾನ
2019 – 140ನೇ ಸ್ಥಾನ
2022 – 150ನೇ ಸ್ಥಾನ
2023 – 161ನೇ ಸ್ಥಾನ
ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ.
ಪ್ರಧಾನಿ@narendramodi ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ…!! ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂಡಿಯಾ ಒಕ್ಕೂಟವು 14 ಪತ್ರಕರ್ತರ ಬಹಿಷ್ಕಾರ ವಿರುದ್ಧ ಜೆ.ಪಿ.ನಡ್ಡಾರ ಹೇಳಿಕೆ ಮುಖ್ಯಮಂತ್ರಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ












