ಇವಿಎಂನಲ್ಲಿ ಬಿಜೆಪಿಗೆ ಹೆಚ್ಚು ಮತ: ಪರಿಶೀಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

0
394

ಸನ್ಮಾರ್ಗ ವಾರ್ತೆ

ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ ನಡೆಸುವ ಸಂದರ್ಭದಲ್ಲಿ ಬಿಜೆಪಿಗೆ ಹೆಚ್ಚು ಮತ ಲಭಿಸಿದ ಹಿನ್ನೆಲೆ ಸುಪ್ರೀಂ ಕೋರ್ಟ್ ಆರೋಪ ಪರಿಶೀಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಇವಿಎಂ-ವಿವಿಪ್ಯಾಟ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತ ಅವರ ಪೀಠ ಮೌಖಿಕ ನಿರ್ದೇಶನ ನೀಡಿತು.

ಸ್ವಯಂಸೇವಾ ಸಂಸ್ಥೆ ಎಡಿಆರ್ ಪರವಾಗಿ ಹಾಜರಾಗಿದ್ದ ನ್ಯಾಯವಾದಿ ಪ್ರಶಾಂತ್ ಭೂಷಣ್, ಕೇರಳದ ಕಾಸರಗೋಡು ಕ್ಷೇತ್ರದಲ್ಲಿ ಇವಿಎಂ ಮೂಲಕ ಅಣಕು ಮತದಾನ ಮಾಡುವ ಸಂದರ್ಭದಲ್ಲಿ ಬಿಜೆಪಿಗೆ ಒಂದು ಹೆಚ್ಚು ಮತ ದಾಖಲಾಗಿದ್ದನ್ನು ಮಾಧ್ಯಮವೊಂದು ಪ್ರಕಟಿಸಿದ್ದ ವರದಿಯನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದರು.

ಇದನ್ನು ಗಮನಿಸಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಚುನಾವಣಾ ಆಯೋಗದ ಪರವಾಗಿ ಹಾಜರಾಗಿದ್ದ ಅಧಿಕಾರಿ ಮಣಿಂದರ್‌ ಸಿಂಗ್‌ ಅವರಿಗೆ ಪರಿಶೀಲನೆಗೊಳಪಡಿಸುವಂತೆ ನಿರ್ದೇಶನ ನೀಡಿದರು.

ಬಿಜೆಪಿಗೆ ಹೆಚ್ಚುವರಿ ಮತ ದಾಖಲಾದ ಈ ವರದಿಯನ್ನು ಆಧರಿಸಿ ಕೇರಳದ ಆಡಳಿತ ಪಕ್ಷ ಎಲ್‌ಡಿಎಫ್ ಹಾಗೂ ವಿಪಕ್ಷ ಯುಡಿಎಫ್ 4 ಇವಿಎಂಗಳ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿತ್ತು.

LEAVE A REPLY

Please enter your comment!
Please enter your name here