ಒತ್ತಡವೇನೇ ಬರಲಿ ಸ್ಪರ್ಧೆ ನಿಶ್ಚಿತ: ಮುತಾಲಿಕ್ ಘೋಷಣೆ

0
296

ಸನ್ಮಾರ್ಗ ವಾರ್ತೆ

ಬೆಂಗಳೂರು: ಕಳೆದ ಕೆಲವು ತಿಂಗಳಿನಿಂದ ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡುವ ಬಗ್ಗೆ ಹಲವು ಸುದ್ದಿಗಳಿಗೆ ಕಾರಣವಾಗಿದ್ದ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇದೀಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾರ್ಕಳ ಕ್ಷೇತ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.

ಕಾರ್ಕಳದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಯಾರು ಏನೇ ಒತ್ತಡ ಹಾಕಿದರೂ ನಾನು ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ ನಾನು ಸ್ಪರ್ಧೆ ಮಾಡುತ್ತೇನೆ” ಎಂದರು.

“ನಾನು ಬಿಜೆಪಿ ವಿರೋಧಿಯಲ್ಲ. ನಾನು ಮೋದಿ ಪರವಾಗಿ ಹಿಂದುತ್ವದ ಪರವಾಗಿದ್ದೇನೆ, ಗೆದ್ದ ಅನಂತರವೂ ನನ್ನ ಬೆಂಬಲ ಬಿಜೆಪಿಗೆ ಇರಲಿದೆ. ನನ್ನ ಸ್ಪರ್ಧೆ ಏನಿದ್ದರೂ ವ್ಯಕ್ತಿಗಳ ವಿರುದ್ಧ, ಭ್ರಷ್ಟರ ವಿರುದ್ದ, ಹಿಂದು ವಿರೋಧಿಗಳ ವಿರುದ್ಧ ಎಂದರು.
ಮುತಾಲಿಕ್ ಸ್ಪರ್ಧೆಯಿಂದ ಕಾಂಗ್ರೆಸ್‌ಗೆ ಲಾಭ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಆ ಪ್ರಶ್ನೆಯೇ ಇಲ್ಲ. ನಾನು ಎಂದಿಗೂ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿಕೊಂಡು ಬಂದವ. ಇಲ್ಲಿ ನಾನು ಗೆಲ್ಲಬೇಕು, ಹಿಂದುತ್ವ ಗೆಲ್ಲಬೇಕು ಅಷ್ಟೇ ಎಂದರು.

“ಉಡುಪಿ ಜಿಲ್ಲೆಯಲ್ಲಿ ಗೋ ಹತ್ಯೆಯಾಗುವ ನಂಬರ್ ಒಂದು ಜಾಗ ಇದ್ದರೆ ಅದು ಕಾರ್ಕಳ ಎನ್ನುತ್ತಿದ್ದಾರೆ. ಇವರಿಗೆ ಗೋ ಮಾತೆಯ ರಕ್ಷಣೆಗಾಗಿ ಅಧಿಕಾರ ಕೊಟ್ಟರೆ ಗೋಮಾತೆ ರಕ್ಷಣೆ ಆಗುತ್ತಿಲ್ಲ” ಎಂದು ಸಚಿವ ಸುನೀಲ್ ಕುಮಾರ್ ವಿರುದ್ಧ ಕಿಡಿಕಾರಿದರು.