ನಾಸಿಕ್‌ನಲ್ಲಿ ಭೀಕರ ಅಪಘಾತ: 11 ಮಂದಿ ಸಜೀವ ದಹನ; 38 ಮಂದಿಗೆ ಗಾಯ

0
164

ಸನ್ಮಾರ್ಗ ವಾರ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಬಸ್‌ಗೆ ಬೆಂಕಿ ತಗುಲಿ 11 ಮಂದಿ ದಾರುಣ ಸಾವನ್ನಪ್ಪಿದ್ದು, 38 ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ 5.15ಕ್ಕೆ ಈ ಘಟನೆ ನಡೆದಿದೆ. ಔರಂಗಾಬಾದ್‌ನಲ್ಲಿ ಡೀಸೆಲ್ ಲಾರಿಗೆ ಡಿಕ್ಕಿ ಹೊಡೆದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು ಈ ಅವಘಡಕ್ಕೆ ಕಾರಣವೆನ್ನಲಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾದ್್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಗುರುತು ಪತ್ತೆಯಾಗಿಲ್ಲ. ಹಲವು ದೇಹಗಳು ಸುಟ್ಟು ಕರಕಲಾಗಿವೆ. ನಿರ್ಜನ ಸ್ಥಳದಲ್ಲಿ ಅಪಘಾತ ಸಂಭವಿಸಿದ ಕಾರಣದಿಂದಾಗಿ ರಕ್ಷಣಾ ಕಾರ್ಯ ವಿಳಂಬವಾಇದೆ. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲಾಗಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಚಿವ ದಾದಾ ಭೂಸ್ ತಿಳಿಸಿದ್ದಾರೆ.