ನೇಹಾ ಕೊಲೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

0
1418

ಸನ್ಮಾರ್ಗ ವಾರ್ತೆ

ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ನಡೆದಿದೆ.

ಸಂಕೇಶ್ವರ – ಸವದತ್ತಿ ಹೆದ್ದಾರಿಯಲ್ಲಿ ಮುಸ್ಲಿಂ ಸಮುದಾಯದ ನೂರಾರು ಮಂದಿ ನೇಹಾ ಹಿರೇಮಠ್ ಫೊಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್ ಎಂಬಾತನನ್ನು ಹುಬ್ಬಳ್ಳಿ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದು, ಆರೋಪಿ ಫಯಾಝ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

ಈ ನಡುವೆ ನೇಹಾ ಕೊಲೆ ಆರೋಪಿ ಫಯಾಝ್ ಬೆಳಗಾವಿ ಜಿಲ್ಲೆಯ ಸವದತ್ತಿಯ ಹತ್ತಿರದ ಮುನವಳ್ಳಿ ನಿವಾಸಿಯಾಗಿದ್ದು, ಅಲ್ಲಿ ಹಿಂದೂ, ಮುಸ್ಲಿಮರು ಜಂಟಿಯಾಗಿ ಹತ್ಯೆ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂಕೇಶ್ವರ – ಸವದತ್ತಿ ಹೆದ್ದಾರಿಯಲ್ಲಿ ಮುಸ್ಲಿಂ ಸಮುದಾಯದ ನೂರಾರು ಮಂದಿ ನೇಹಾ ಹಿರೇಮಠ್ ಫೊಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲೂ ಸಹ ನೇಹಾ ಹತ್ಯೆಯನ್ನು ಮುಸ್ಲಿಂ ಸಮುದಾಯ ತೀವ್ರವಾಗಿ ಖಂಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದೆ. ಅಳ್ನಾವರ, ಕುಂದಗೋಳ, ಕಲಘಟಗಿ, ಹುಬ್ಬಳ್ಳಿ ಹಾಗೂ ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷರು ಕಮಿಷನರ್ ಅವರಿಗೆ ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮ ವಹಿಸಲು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here