ತಾನು ಅಲ್ಪಸಂಖ್ಯಾತರ ವಿರುದ್ಧ ಎಂದು ಮಾತಾಡಿಯೇ ಇಲ್ಲ: ಪ್ರಧಾನಿ ನರೇಂದ್ರ ಮೋದಿ

0
228

ಸನ್ಮಾರ್ಗ ವಾರ್ತೆ

ತಾನು ಅಲ್ಪಸಂಖ್ಯಾತರ ವಿರುದ್ಧ ಎಂದು ಮಾತಾಡಿಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ಈಗಲ್ಲ ಎಂದು ಕೂಡ ಅಲ್ಪಸಂಖ್ಯಾತರ ವಿರುದ್ಧ ಕೆಲಸ ಮಾಡಿಲ್ಲ. ಆದರೆ ಯಾರನ್ನು ಕೂಡ ನಾವು ವಿಶೇಷ ಪೌರರಾಗಿ ಅಂಗೀಕರಿಸುವುದಕ್ಕೆ ತಯಾರಿಲ್ಲ ಎಂದು ಅವರು ಹೇಳಿದ್ದಾರೆ. ಪಿ ಟಿ ಐ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂವಿಧಾನದ ಜಾತ್ಯತೀತ ಸ್ವರೂಪವನ್ನು ಕೆಡಿಸಲು ಕಾಂಗ್ರೆಸ್ ಪ್ರಯತ್ನಿಸಿದೆ. ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಪ್ರತಿಪಕ್ಷಗಳು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ. ಇದನ್ನು ವಿವರಿಸುವುದಕ್ಕಾಗಿ ನಾನು ಚುನಾವಣಾ ಪ್ರಚಾರದ ವೇದಿಕೆಯಲ್ಲಿ ಭಾಷಣ ಮಾಡಿದ್ದೇನೆ ಎಂದು ಮೋದಿ ಸಮರ್ಥಿಸಿಕೊಂಡಿದ್ದಾರೆ

ಅಂಬೇಡ್ಕರ್ ಮತ್ತು ನೆಹರು ಅವರು ಧರ್ಮದ ಆಧಾರದಲ್ಲಿ ಮೀಸಲಾತಿ ಬೇಡ ಎಂದು ತೀರ್ಮಾನಿಸಿದ್ದರು. ಆದರೆ ಇದೀಗ ಕಾಂಗ್ರೆಸ್ ಅದರಿಂದ ಹಿಂಜರಿದಿದೆ. ಅದನ್ನು ಬಹಿರಂಗ ಪಡಿಸುವುದು ನನ್ನ ಕರ್ತವ್ಯವಾಗಿದೆ. ಸಂವಿಧಾನ ರಚನಾ ಸಭೆಯಲ್ಲಿ ನನ್ನ ಪಕ್ಷದ ಒಬ್ಬರೂ ಇರಲಿಲ್ಲ ಎಂದು ಮೋದಿ ಹೇಳಿಕೊಂಡಿದ್ದಾರೆ.