ದ್ವಿತೀಯ ಪಿಯುಸಿ ಮಕ್ಕಳು ಪರೀಕ್ಷೆ ಇಲ್ಲದೆಯೇ ಪಾಸ್: ಶಿಕ್ಷಣ ಸಚಿವ ಸುರೇಶ್ ಕುಮಾರ್

0
502

ಸನ್ಮಾರ್ಗ ವಾರ್ತೆ

ಬೆಂಗಳೂರು: ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ ಪರೀಕ್ಷೆ ಪೋಷಕರು, ಮಕ್ಕಳು ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಮಕ್ಕಳ ಯೋಗಕ್ಷೇಮ, ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ದ್ವಿತೀಯ ಪರೀಕ್ಷೆಯನ್ನು ರದ್ದು ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಹೇಳಿದ್ದಾರೆ.

ಮಕ್ಕಳ ಪರೀಕ್ಷೆ ವಿಚಾರವಾಗಿ ರಾಜಧಾನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ 2ನೇ ಅಲೆ ಹಿನ್ನೆಲೆ ಎಸ್‍ಎಸ್‍ಎಲ್‍ಸಿ ಮತ್ತಿ ದ್ವಿತೀಯ ಪಿಯುಸಿ ಮಾಡಬೇಕಾ ಬೇಡವಾ ಅಂತ ಚರ್ಚೆ ಆಗಿತ್ತು. ಬೇಕು ಅನ್ನೋದು, ಬೇಡ ಅನ್ನೋರ ವರ್ಗ ಇದೆ. ಹಿರಿಯ ಮಾಧ್ಯಮ ಮಿತ್ರರ ಸಲಹೆ ಪಡೆದಿದ್ದೇನೆ. ಪೋಷಕರು, ಮಕ್ಕಳು ಅಭಿಪ್ರಾಯ ಸಂಗ್ರಹ ಮಾಡಿ ಪಿಯುಸಿ ಪರೀಕ್ಷೆ ಮಾಡಿದರೆ 12 ದಿನ ಬೇಕು ಎಂದಿದ್ದಾರೆ.

ದ್ವಿತೀಯ ಪರೀಕ್ಷೆ ನಡೆಸಲು ಹೋದರೆ ಕನಿಷ್ಟ 12 ದಿನ ಬೇಕಾಗುತ್ತದೆ. ಹೀಗಾಗಿ ಪರೀಕ್ಷೆ ರದ್ದು ಮಾಡುತ್ತಿದ್ದೇವೆ. ಈ ಬಗ್ಗೆ ಬೇಸರವಾಗುವುದು ಬೇಡ. ಬದಲಾಗಿ ನೀಟ್​ ಮತ್ತು ಸಿಇಟಿ ಪರೀಕ್ಷೆಗಳತ್ತ ಹೆಚ್ಚು ಗಮನ ಕೊಟ್ಟು ತಯಾರಿ ನಡೆಸಿ. ಅಷ್ಟಾದರೂ ಅಸಮಾಧಾನವಿದೆ ಎಂದಾದಲ್ಲಿ ಅಂತಹವರಿಗೆ ಮಾತ್ರ ಪರೀಕ್ಷೆ ವ್ಯವಸ್ಥೆ ಮಾಡೋಣ ಎಂದು ಸಚಿವರು ಮಕ್ಕಳಿಗೆ ಭರವಸೆ ನೀಡಿದ್ದಾರೆ.

ಈ ಬಾರಿ ಅಂಕಪಟ್ಟಿಯಲ್ಲಿ ಮಕ್ಕಳು ಎಷ್ಟು ಅಂಕ ಪಡೆದಿದ್ದಾರೆ ಎಂದು ನೀಡಲಾಗುವುದಿಲ್ಲ. ಬದಲಾಗಿ ಗ್ರೇಡಿಂಗ್ ನೀಡಲಾಗುವುದು. ಒಂದು ವೇಳೆ ಪ್ರಥಮ ಪಿಯುಸಿ ಪರೀಕ್ಷೆ ಗ್ರೇಡಿಂಗ್​ ಬಗ್ಗೆ ಅಸಮಾಧಾನವಿದ್ದರೆ ಅವರು ಪರೀಕ್ಷೆ ಬರೆಯುತ್ತೇವೆಂದು ತಿಳಿಸಬಹುದು. ಕೊರೊನಾ ಕಡಿಮೆಯಾದ ನಂತರ ಅವರಿಗೆ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಯೋಚಿಸಲಾಗುವುದು ಎಂದು ತಿಳಿಸಿದ್ದಾರೆ.

ಎಸ್​ಎಸ್​ಎಲ್​ಸಿ ಮಕ್ಕಳಿಗೆ ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಸುತ್ತೇವೆ ಎನ್ನುವುದು ಈಗಿನ ನಿರ್ಧಾರ. ಆದರೆ, ಮೂರನೇ ಅಲೆಯನ್ನು, ಅದರ ಪರಿಸ್ಥಿತಿಯನ್ನು ಈಗ ನಿರ್ಧರಿಸಲಾಗುವುದಿಲ್ಲ. ಆಗ ಪರಿಸ್ಥಿತಿಗೆ ತಕ್ಕಂತೆ ಮತ್ತೆ ನಿರ್ಧರಿಸುವುದೇ ಸೂಕ್ತ ಎಂದಿದ್ದಾರೆ. ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ಕೊಡುವುದನ್ನು ಬಿಟ್ಟರೆ ನಮ್ಮ ಬಳಿ ಬೇರೆ ಆಯ್ಕೆಯೇ ಇಲ್ಲ ಎಂದು ಸಚಿವ ಸುರೇಶ್ ಕುಮಾರ್‌ ಹೇಳಿಕೆ ನೀಡಿದ್ದಾರೆ.

SSLCಯಲ್ಲಿ ಯಾರನ್ನೂ ಫೇಲ್ ಮಾಡುವುದಿಲ್ಲ. 120 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಪತ್ರಿಕೆ. ಪ್ರತಿ ವಿಷಯಕ್ಕೆ 40 ಅಂಕಗಳು ಇರುತ್ತದೆ ಎಂದು ತಿಳಿಸಿದ್ದಾರೆ. ಜುಲೈ ಕೊನೆಯ ವಾರ ಅಥವಾ ಆಗಸ್ಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ನೀಡುತ್ತೇವೆ. ಎಸ್​​ಎಸ್​ಎಲ್​ಸಿ ಪರೀಕ್ಷೆ ದಿನ ಕೊಠಡಿ ಮೇಲ್ವಿಚಾರಕರು ಲಸಿಕೆ ಪಡೆದಿರಬೇಕು ಎಂದು ನಿಯಮ ರೂಪಿಸಿದ್ದೇವೆ. ಎಸ್​ಎಸ್​ಎಲ್​ಸಿಯಲ್ಲಿ ಯಾರನ್ನೂ ಫೇಲ್​ ಮಾಡುವುದಿಲ್ಲ. ಮೊದಲೇ ಮಾದರಿ ಪ್ರಶ್ನೆ ಪತ್ರಿಕೆಯನ್ನು ನೀಡುತ್ತೇವೆ. ಅದನ್ನು ನೋಡಿಕೊಂಡು ಸಿದ್ಧತೆ ಮಾಡಿಕೊಳ್ಳಿ. ಒತ್ತಡವಾಗಲಿ, ಆತಂಕವಾಗಲೀ ಬೇಡ. ಅತ್ಯಂತ ಸರಳ ಹಾಗೂ ನೇರ ಪ್ರಶ್ನೆಗಳನ್ನಷ್ಟೇ ಕೇಳಲಾಗುವುದು. ಒಂದು ಡೆಸ್ಕ್‌ಗೆ ಒಬ್ಬ ವಿದ್ಯಾರ್ಥಿಯನ್ನು ಕೂರಿಸುತ್ತೇವೆ. ಪರೀಕ್ಷೆ ಬರೆಯುವ ಎಲ್ಲರಿಗೂ N95 ಮಾಸ್ಕ್ ನೀಡುತ್ತೇವೆ. ಮಾದರಿ ಪ್ರಶ್ನೆ ಪತ್ರಿಕೆ ಶಾಲೆಗಳಿಗೆ ಕಳಿಸಲು ವ್ಯವಸ್ಥೆ ಆಗಿದೆ. ವೆಬ್‌ಸೈಟ್‌ನಲ್ಲೂ ಮಾದರಿ ಪ್ರಶ್ನೆಪತ್ರಿಕೆ ಹಾಕಲಾಗುವುದು. SSLCಯಲ್ಲಿ ಯಾರನ್ನೂ ಫೇಲ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.