ಲಸಿಕೆಯ ಕೊರತೆಯಿಂದ ಮುಂದಿನ 2 ದಿನ ದ.ಕ. ಜಿಲ್ಲೆಯಲ್ಲಿ ಲಸಿಕಾ ಶಿಬಿರ ಇಲ್ಲ: ಆರೋಗ್ಯಾಧಿಕಾರಿ

0
334

ಸನ್ಮಾರ್ಗ ವಾರ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಪೂರೈಕೆಯಾದ ಕೋವಿಡ್ ಲಸಿಕೆಯು, ಫಲಾನುಭವಿಗಳಿಗೆ ಲಸಿಕಾಕರಣ ಮಾಡಿ ಮುಗಿದಿರುವ ಕಾರಣ ಸದ್ಯ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನ ಲಸಿಕೆ ನೀಡುವ ಪ್ರಕ್ರಿಯೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಲ್ಲ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂದಿನ 2 ದಿನಗಳು ವೆನ್ಲಾಕ್ ಜಿಲ್ಲಾಸ್ಪತ್ರೆ ಸೇರಿದಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಲಸಿಕಾ ಶಿಬಿರವು ಇರುವುದಿಲ್ಲ. ಲಸಿಕೆ ಲಭ್ಯವಾದ ಇನ್ನೆರಡು ದಿನಗಳ ನಂತರ ಮೇಲೆ ತಿಳಿಸಿರುವ ಎಲ್ಲಾ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾಕರಣವನ್ನು ಮುಂದುವರಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.