ಕನ್ನಡದ ಖ್ಯಾತ ನಿಘಂಟು ತಜ್ಞ, ನಾಡೋಜ ಪ್ರೊ. ಜಿ ವೆಂಕಟಸುಬ್ಬಯ್ಯ ನಿಧನ

0
820

ಸನ್ಮಾರ್ಗ ವಾರ್ತೆ

ಬೆಂಗಳೂರು: 2017ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದ ಕನ್ನಡ ಸಾಹಿತ್ಯ ಲೋಕದ ಖ್ಯಾತ ಕನ್ನಡ ನಿಘಂಟು ತಜ್ಞ, ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಭಾನುವಾರ ತಡರಾತ್ರಿ 1.15 ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 108 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ವಾರದ ಹಿಂದೆ ಮೂತ್ರನಾಳದ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದ ಅವರು ಶೀಘ್ರದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವುದಲ್ಲಿದ್ದರು. ಆದರೆ ರಾತ್ರಿ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡು ಕೊನೆಯುಸಿರೆಳೆದಿದ್ದಾರೆ.

ಜಯನಗರದ 7ನೇ ಬ್ಲಾಕ್‌ನ ನಿವಾಸದಲ್ಲಿ ಅಂತಿಮ‌ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಚಾಮರಾಜಪೇಟೆಯ ಚಿತಾಗಾರದಲ್ಲಿ ಚಾಮರಾಜಪೇಟೆಯ ಚಿತಾಗಾರದಲ್ಲಿ ಮಧ್ಯಾಹ್ನ 12.30ಗೆ ಅಂತ್ಯಕ್ರಿಯೆ ನಡೆಯಲಿದೆ.

ಕನ್ನಡ ಭಾಷೆಯ ವ್ಯಾಕರಣಕ್ಕೆ ಸಂಬಂಧಿಸಿ ವೆಂಕಟಸುಬ್ಬಯ್ಯ ಅನೇಕ ಕೃತಿಗಳನ್ನು ರಚಿಸಿದ್ದರು.‌ ಕನ್ನಡ ಭಾಷೆ ಅಥವಾ ಪದಗಳ ಅರ್ಥವಿವರಣೆಗೆ ಹಾಗೂ ಭಾಷೆಗೆ ಸಂಬಂಧಿಸಿದ ಗೊಂದಲಗಳ ನಿವಾರಣೆಗೆ ಇಂದಿಗೂ ವೆಂಕಟಸುಬ್ಬಯ್ಯ ರಚಿಸಿದ ಕೃತಿಗಳನ್ನೇ ಆಧಾರವಾಗಿ ಬಳಸಲಾಗುತ್ತದೆ. ಭಾಷೆಗೆ ನೀಡಿದ ಕೊಡುಗೆಗಾಗಿ ಅವರು ಪದ್ಮಶ್ರೀ ಪ್ರಶಸ್ತಿಗೂ ಭಾಜನರಾಗಿದ್ದರು….

ಆಗಸ್ಟ್ 23, 1913 ರಂದು ಕೈಗೊನಹಳ್ಳಿ ಗ್ರಾಮದಲ್ಲಿ ಜನಿಸಿದ ಅವರು ಯುವರಾಜ ಮತ್ತು ಮೈಸೂರಿನ ಮಹಾರಾಜ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ವೆಂಕಟಸುಬ್ಬಯ್ಯ ಮಂಡ್ಯ ಜಿಲ್ಲೆಯಲ್ಲಿ ಇಂಗ್ಲಿಷ್ ಶಿಕ್ಷಕರಾಗಿ ಪ್ರಾರಂಭಿಸಿದರು. ನಂತರ, ಅವರು ಬೆಂಗಳೂರಿಗೆ ತೆರಳಿ 1973 ರಲ್ಲಿ ನಿವೃತ್ತಿಯಾಗುವ ಮೊದಲು ವಿಜಯ ಕಾಲೇಜನ್ನು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು. ಅವರು 60 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ.