ಸನ್ಮಾರ್ಗ ವಾರ್ತೆ
ಬೆಂಗಳೂರು: ದೇಶದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಸತತ 14ನೇ ದಿನ ಏರಿಕೆ ಕಾಣುತ್ತಿದ್ದು, ತೈಲ ಬೆಲೆ ಇಂದು ಮತ್ತೆ ಹೊಸ ಸಾರ್ವಕಾಲಿಕ ದಾಖಲೆ ಬರೆದಿದೆ. ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 31 ಪೈಸೆ ಏರಿಕೆಯಾಗಿದ್ದು ಪೆಟ್ರೋಲ್ ಬೆಲೆ 108.08 ರೂ.ಗೆ ಏರಿಕೆಯಾಗಿದೆ, ಬಳ್ಳಾರಿಯಲ್ಲಿ 1.12 ರೂ ಏರಿಸಿದ್ದು, ಅತ್ಯಧಿಕ 110.27 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ಡೀಸೆಲ್ ಬೆಲೆ 10 ಪೈಸೆ ಏರಿಸಿದ್ದು, ಲೀಟರ್ ಡೀಸೆಲ್ಗೆ 100.04 ರೂ. ಆಗಿದೆ. ಪ್ರಸ್ತುತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಹ ಇಂದು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ.












