ಸನ್ಮಾರ್ಗ ವಾರ್ತೆ
ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ವಿಚಾರವಾಗಿ ಕಳೆದ ಆರು ತಿಂಗಳಿನಿಂದ ಸುದ್ದಿಯಲ್ಲಿರುವ ಓಲಾ ಕಂಪನಿ, ಸ್ಕೂಟರ್ ನ ಮೊದಲ ವಿಡಿಯೋ ಬಿಡುಗಡೆ ಮಾಡಿದೆ. ಇಂದು ಟ್ವಿಟ್ಟರ್ ನಲ್ಲಿ ತಾನೇ ಓಡಿಸಿರುವ ಎಲೆಕ್ಟ್ರಿಕ್ ಸ್ಕೂಟರ್ ನ ವಿಡಿಯೋವನ್ನು ಸಿಇಓ ಭವಿಷ್ ಅಗರ್ವಾಲ್ ಬಿಡುಗಡೆ ಮಾಡಿದ್ದಾರೆ.
#JoinTheRevolution ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ವಿಡಿಯೋ ಪೋಸ್ಟ್ ಮಾಡಿರುವ ಅವರು, ಸ್ಕೂಟರ್ ಈಗ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ ಎಂಬ ಸುಳಿವು ನೀಡಿದ್ದು, ಪೆಟ್ರೋಲ್ ಗೆ ಬೆಲೆ ಹೆಚ್ಚಾಗುತ್ತಿರುವ ಮಧ್ಯೆ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಸಾರ್ವಜನಿಕರಲ್ಲಿ ಹೆಚ್ಚು ಕುತೂಹಲ ಮೂಡಿಸಿದೆ.
ಓಲಾ ತಮಿಳುನಾಡಿನಲ್ಲಿ ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ಕಾರ್ಖಾನೆಯನ್ನು ಪ್ರಾರಂಭಿಸುವುದರೊಂದಿಗೆ, ಎಲೆಕ್ಟ್ರಿಕ್ ಸ್ಕೂಟರ್ ಸಿದ್ಧವಾಗಲು ಮತ್ತು ರಾಷ್ಟ್ರವ್ಯಾಪಿ ಹೈಪರ್ ಚಾರ್ಜಿಂಗ್ ನೆಟ್ವರ್ಕ್ ಅನ್ನು ಘೋಷಿಸಿತ್ತು. ಅಲ್ಲದೇ., ದ್ವಿಚಕ್ರ ವಾಹನ ಕಾರ್ಖಾನೆಗೆ ಸಹಕಾರ ನೀಡಿದ್ದಕ್ಕಾಗಿ ಇತ್ತೀಚೆಗಷ್ಟೇ ತಮಿಳುನಾಡು ಸಿಎಂ ಸ್ಟ್ಯಾಲಿನ್ ರವರನ್ನು ಭೇಟಿ ಮಾಡಿದ್ದ ಬಗ್ಗೆ ಸಿಇಓ ಭವಿಷ್ ಅಗರ್ವಾಲ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಸುದ್ದಿ ಹಂಚಿದ್ದರು.
ಅಗರ್ವಾಲ್ ಬೆಂಗಳೂರಿನ ರಸ್ತೆಗಳಲ್ಲಿ ಕಪ್ಪು ಬಣ್ಣದ ಆಕರ್ಷಕ ವಿನ್ಯಾಸ ಹೊಂದಿರುವ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋದಲ್ಲಿ, ಎರಡು ಹೆಲ್ಮೆಟ್ಗಳಿಗೆ ಸ್ಥಳಾವಕಾಶವಿರುವ ದೊಡ್ಡ ಅಂಡರ್ಸೀಟ್ ಸ್ಟೊರೇಜ್ ಸಾಮರ್ಥ್ಯವನ್ನು ಹೊಂದಿದೆ. 0-60 ಕಿ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿದೆ ಎಂಬಿತ್ಯಾದಿ ಅಂಶಗಳನ್ನು ಭವಿಷ್ ಅಗರ್ವಾಲ್ ವಿಡಿಯೋದಲ್ಲಿ ಬರೆದುಕೊಂಡಿದ್ದಾರೆ. ಯಾವಾಗ ಮಾರುಕಟ್ಟೆಗೆ ಬರುತ್ತದೆ, ಎಷ್ಟು ಬೆಲೆ ಇರಲಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.


Took this beauty for a spin! Goes 0-60 faster than you can read this tweet! Ready or not, a revolution is coming! #JoinTheRevolution @Olaelectric https://t.co/ZryubLLo6X pic.twitter.com/wPsch79Djf
— Bhavish Aggarwal (@bhash) July 2, 2021












