ಮಂಗಳೂರು: ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಒಂದು ವಾರ ಕ್ವಾರಂಟೈನ್ ಕಡ್ಡಾಯ

0
18

ಸನ್ಮಾರ್ಗ ವಾರ್ತೆ

ಮಂಗಳೂರು: ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಮಂಗಳೂರು ನಗರವನ್ನೊಳಗೊಂಡಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೊರೋನ ಪಾಸಿಟಿವಿಟಿ ಪ್ರಕರಣಗಳ ಹೆಚ್ಚಳದ ಪರಿಸ್ಥಿತಿಯಲ್ಲಿ ಮುನ್ನೆಚ್ಚರಿಕೆಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು. ಕೇರಳದಲ್ಲಿ ಪಾಸಿಟಿವಿ ದರ 5ಕ್ಕಿಂತ ಮೇಲ್ಪಟ್ಟಿದೆ. ಕೇರಳದ ವಿದ್ಯಾರ್ಥಿಗಳು ದಕ್ಷಿಣ ಕನ್ನಡಕ್ಕೆ ಬರಬೇಕಾದರೆ 72 ಗಂಟೆಗಳ ಆರ್‌ಟಿಪಿಸಿಆರ್ ನೆಗಟಿವ್ ಸರ್ಟಿಫಿಕೆಟ್ ಹಾಜರುಪಡಿಸಬೇಕಾಗಿದೆ. ಇದರ ಜೊತೆಗೆ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.

LEAVE A REPLY

Please enter your comment!
Please enter your name here