ಆಂಧ್ರದಲ್ಲಿ ಹರಡಿದ ಅಜ್ಞಾತ ಕಾಯಿಲೆ: 200ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲು

0
640

ಸನ್ಮಾರ್ಗ ವಾರ್ತೆ

ಹೈದರಾಬಾದ್,ಡಿ.7: ಆಂಧ್ರಪ್ರದೇಶದ ಎಲೂರು ನಗರದಲ್ಲಿ ಇನ್ನೂರಕ್ಕೂ ಹೆಚ್ಚು ಮಂದಿ ಅಜ್ಞಾತ ರೋಗದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಾಗಿ ಮಕ್ಕಳಲ್ಲಿ ಈ ರೋಗ ಕಂಡು ಬಂದಿದೆ. ಬಳಲಿಕೆ, ವಾಂತಿ ಹಠಾತ್ ತಲೆ ಸುತ್ತುವುದು ಎರಡು ದಿವಸಗಳಲ್ಲಿ 200ಕ್ಕೂ ಹೆಚ್ಚು ಮಂದಿ ಎಲೂರಿನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ 160 ಮಂದಿ, ರವಿವಾರ 46 ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ. ಅಪಸ್ಮಾರಕ್ಕೆ ಸಮಾನವಾದ ರೋಗಲಕ್ಷಣಗಳು ಗೋಚರಿಸಿವೆ. ಬಾಯಿಯಿಂದ ನೊರೆ ಬರುತ್ತಿದೆ ಎಂಬುದಾಗಿ ವರದಿಯಾಗಿದೆ.

ಅರುವತ್ತು ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದು ಶನಿವಾರ ಆಸ್ಪತ್ರೆಗೆ ದಾಖಲಿಸಲ್ಪಟ್ಟವರಲ್ಲಿ ಹೆಚ್ಚಿನವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಪ್ರದೇಶದಲ್ಲಿ ಆರೋಗ್ಯ ಕಾರ್ಯಕರ್ತರು ರೋಗಿಗಳ ರಕ್ತದ ಸ್ಯಾಂಪಲ್ ಪಡೆಯುತ್ತಿದ್ದು ಅಸಹಜತೆಯೇನೂ ಕಂಡು ಬಂದಿಲ್ಲ.