ಪಹಲ್ಗಾಮ್ ಭಯೋತ್ಪಾದಕ ದಾಳಿ; ತನಿಖೆ ಎನ್ಐಎಗೆ ಹಸ್ತಾಂತರ

0
370

ಸನ್ಮಾರ್ಗ ವಾರ್ತೆ

ನವದೆಹಲಿ: ಪಹಲ್ಗಾಮ್‌ನಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ಹಸ್ತಾಂತರಿಸಲಾಗಿದೆ. ಇದುವರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಈಗ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಎನ್ಐಎ ತನಿಖೆ ನಡೆಸಲಿದೆ.

ಈಗಾಗಲೇ ಎನ್ಐಎ ಕಾರ್ಯಾಚರಣೆ ಆರಂಭಿಸಿದ್ದು, ಹಲವು ಪ್ರದೇಶಗಳಲ್ಲಿ ವ್ಯಾಪಕ ತಪಾಸಣೆ ನಡೆಸುತ್ತಿದೆ. ತನಿಖೆಗೆ ಎನ್ಐಎ ಇನ್ಸ್‌ಪೆಕ್ಟರ್ ಜನರಲ್ ನೇತೃತ್ವ ವಹಿಸುತ್ತಿದ್ದು, ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಹಾಗೂ ಎಸ್‌ಪಿ ಕೂಡ ತಂಡದಲ್ಲಿ ಸೇರಿದ್ದಾರೆ. ಘಟನೆಯ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುವ ಜೊತೆಗೆ, ವಿಧಿವಿಜ್ಞಾನ ತಜ್ಞರ ಸಹಕಾರದಿಂದ ಪರಿಶೀಲನೆ ನಡೆಯುತ್ತಿದೆ.

ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ತಿಳಿಸಿದೆ. ಮೃತಪಟ್ಟವರಲ್ಲಿ ನೇಪಾಳದ ಪ್ರಜೆಯೊಬ್ಬರೂ ಇದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಜನರು ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.