ಎ. 19-26: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಂಗಳೂರು ಆಕಾಶವಾಣಿಯಲ್ಲಿ ‘ನೇರ ಪೋನ್ ಇನ್’ ಕಾರ್ಯಕ್ರಮ

0
405

ಸನ್ಮಾರ್ಗ ವಾರ್ತೆ

ಮಂಗಳೂರು: 2021ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಜಿಲ್ಲೆಯ ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಲು ಅನುಕೂಲವಾಗುವಂತೆ ಮಂಗಳೂರು ಆಕಾಶವಾಣಿ(100.3FM) ಮೂಲಕ “ನೇರ ಪೋನ್ ಇನ್” ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ವಿಷಯವಾರು ಸಂಪನ್ಮೂಲ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಪ್ರೌಢಶಾಲೆಗಳಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಪೋಷಕರು ಆಯಾ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆ/ಅನುಮಾನಗಳಿದ್ದಲ್ಲಿ ದೂರವಾಣಿ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.

ಎಪ್ರಿಲ್ 19 ರಂದು ಬೆಳಿಗ್ಗೆ 11 ಗಂಟೆಯಿಂದ 12 ರವರೆಗೆ ಪ್ರಥಮ ಭಾಷೆ- ಕನ್ನಡ, 20 ರಂದು ಬೆಳಿಗ್ಗೆ 11 ಗಂಟೆಯಿಂದ 12 ರವರೆಗೆ ಗಣಿತ, 21 ರಂದು ಬೆಳಿಗ್ಗೆ 11 ಗಂಟೆಯಿಂದ 12 ರವರೆಗೆ ತೃತೀಯ ಭಾಷೆ- ಹಿಂದಿ, 22 ರಂದು ಬೆಳಿಗ್ಗೆ 11 ಗಂಟೆಯಿಂದ 12 ರವರೆಗೆ ವಿಜ್ಞಾನ, 23 ರಂದು ಬೆಳಿಗ್ಗೆ 11 ಗಂಟೆಯಿಂದ 12 ರವರೆಗೆ ದ್ವಿತೀಯ ಭಾಷೆ- ಇಂಗ್ಲೀಷ್, 24 ರಂದು ಬೆಳಿಗ್ಗೆ 11 ಗಂಟೆಯಿಂದ 12 ರವರೆಗೆ ಸಮಾಜ ವಿಜ್ಞಾನ ಹಾಗೂ 26 ರಂದು ಬೆಳಿಗ್ಗೆ 11 ಗಂಟೆಯಿಂದ 12 ರವರೆಗೆ ಪ್ರಥಮ ಭಾಷೆ – ಇಂಗ್ಲೀಷ್ ದ್ವಿತೀಯ ಭಾಷೆ- ಕನ್ನಡ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಪ್ರಶ್ನೆಗಳನ್ನು ಕೇಳಲು ದೂ. ಸಂಖ್ಯೆ 0824-2211999, 8277038000 ಗೆ ಕರೆ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.