ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಿಂದ ಪಿಎಂ ಕೇರ್ಸ್ ನಿಧಿಗೆ 5 ಲಕ್ಷ ರೂ. ದೇಣಿಗೆ

0
785

ಸನ್ಮಾರ್ಗ ವಾರ್ತೆ

ಮಂಗಳೂರು, ಮೇ .9: ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಎಂ.ಮಸೂದ್ ಅವರು ಪಿಎಂ ಕೇರ್ಸ್ ನಿಧಿಗೆ 5 ಲಕ್ಷ ರೂ. ದೇಣಿಗೆಯ ಚೆಕ್‌ನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಹಸ್ತಾಂತರಿಸಿದರು.

ಮಸೂದ್ ಅವರ ಸಹೋದರ ಹಾಗೂ ಅನಿವಾಸಿ ಉದ್ಯಮಿ ಕೆ.ಎಸ್.ನಿಸಾರ್ ಅಹ್ಮದ್ ಅವರು ಈ ದೇಣಿಗೆಯನ್ನು ಪಿಎಂ ಕೇರ್ಸ್ ಫಂಡ್‌ಗೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಇರುವ ಸಂಸದರ ಕಚೇರಿಯಲ್ಲಿ ಚೆಕ್ ಹಸ್ತಾಂತರಿಸಲಾಯಿತು.

ಗಲ್ಫ್‌ ರಾಷ್ಟ್ರಗಳಲ್ಲಿ ಉದ್ಯಮವನ್ನು ನಡೆಸುತ್ತಿರುವ ನಿಸಾರ್ ಅಹ್ಮದ್‌ರವರು ವಿವಿಧ ದೇಶಗಳಲ್ಲಿ ಸಂಕಷ್ಟದಲ್ಲಿ ಇರುವ ಅನಿವಾಸಿ ಭಾರತೀಯರನ್ನು ಏರ್ ಲಿಫ್ಟ್ ಮಾಡುವ ದೃಢ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ನಡೆಯನ್ನು ಪ್ರಶಂಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಾಯಕ ರವಿಶಂಕರ್ ಮಿಜಾರ್, ಡಾ. ಆರೀಫ್ ಮಸೂದ್, ಹಾಜಿ ಅಬ್ದುಲ್ ರಜಾಕ್, ಮಾಸ್ಟರ್ ಫ್ಲವರ್ಸ್ ಫಕೀರಬ್ಬ, ಮಹಮ್ಮದ್ ಹನೀಫ್ ಮೊದಲಾದವರು ಉಪಸ್ಥಿತರಿದ್ದರು.