ಕೊರೋನ ಪ್ರಕರಣಗಳಲ್ಲಿ ಹೆಚ್ಚಳ ಹಿನ್ನೆಲೆ: ಮಾರ್ಚ್ 17ರಂದು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ

0
412

ಸನ್ಮಾರ್ಗ ವಾರ್ತೆ

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳಲ್ಲಿ ಗಣನೀಯ ಹೆಚ್ಚಳ ಕಂಡುಬರುತ್ತಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 17ಕ್ಕೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.

ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಗಳ ಜೊತೆ ಮೋದಿಯವರು ಮಾರ್ಚ್ 17ರ ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ ಎಂಬುದಾಗಿ ವರದಿಯಾಗಿದೆ.

ಕೊರೋನಾ ಲಸಿಕೆ ಕುರಿತು ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದರು.