ಅಶ್ಲೀಲ ಫಿಲಂ‌ ನಿರ್ಮಾಣ: ಬಾಲಿವುಡ್ ನಟಿ‌ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅರೆಸ್ಟ್

0
1346

ಸನ್ಮಾರ್ಗ ವಾರ್ತೆ

ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಅವುಗಳನ್ನು ಕೆಲವು ಆ್ಯಪ್‌ಗಳ ಮೂಲಕ ಪ್ರಕಟಿಸಿರುವ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾರವನ್ನು ಮುಂಬೈ ಪೊಲೀಸರು ಬಂಧಿಸಿರುವುದಾಗಿ ಎ ಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪೋರ್ನೋಗ್ರಫಿ ಫಿಲಂ ನಿರ್ಮಿಸಿ ಅದನ್ನು ಕೆಲವೊಂದು ವೆಬ್ ಸೈಟ್ ಹಾಗೂ ಆ್ಯಪ್ ಗಳಲ್ಲಿ ಪ್ರಸಾರ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಅಪರಾಧ ವಿಭಾಗ ಬಂಧಿಸಿದೆ ಎಂದು ಮುಂಬೈ ನಗರದ ಪೊಲೀಸ್ ಕಮಿಷನರ್ ಹೇಮಂತ್ ನಗರಾಲೆ ತಿಳಿಸಿದ್ದು, ಅವರು ಪ್ರಮುಖ ಸೂತ್ರರಾಗಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ನಮ್ಮಲ್ಲಿ ಸಾಕಷ್ಟು ಪುರಾವೆಗಳಿವೆ. ‌ಈ ಹಿನ್ನೆಲೆಯಲ್ಲಿ ಕ್ರೈಮ್ ಬ್ರಾಂಚ್ ಬಂಧಿಸಿದೆ ಎಂದವರು ತಿಳಿಸಿದ್ದಾರೆ.