ಸನ್ಮಾರ್ಗ ವಾರ್ತೆ
ನವದೆಹಲಿ:ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪ್ರಾರಂಭಿಸಲಾದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಯೋಜನೆಯನ್ನು ಮುಂದುವರಿಸುವ ಉದ್ದೇಶವಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.
ರಾಜ್ಯಸಭೆಯಲ್ಲಿ, ಗ್ರಾಹಕ, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವ ದನ್ವೆ ರೌಸಾಹೇಬ್ ಅವರು ಪೂರಕ ಪ್ರಶ್ನೆಗೆ ಈ ಉತ್ತರ ನೀಡಿದ್ದಾರೆ. ಈ ಯೋಜನೆಯನ್ನು ಕೊರೋನಾ ಅವಧಿಗೆ ಮಾತ್ರ ಮೀಸಲಾಗಿರುವುದರಿಂದ ಅದನ್ನು ಮೀರಿ ಮುಂದುವರಿಯುವ ಯಾವುದೇ ಯೋಜನೆಗಳಿಲ್ಲ ಎಂದು ಅವರು ಹೇಳಿದರು.
ಮಾರ್ಚ್ 2020ರಲ್ಲಿ ಪ್ರಾರಂಭಿಸಲಾದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿಯಲ್ಲಿ ಸರ್ಕಾರವು ಸುಮಾರು 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಿರುವುದಾಗಿ ಅವರು ಹೇಳಿದರು.












