ಹೊಸ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಎಸ್ಸಿ ಎಸ್ಟಿಗಳಿಗೆ ಪ್ರತಿಕೂಲ ಪರಿಣಾಮ; ಪ್ರಕಾಶ್ ಅಂಬೇಡ್ಕರ್

0
1684

ಮುಂಬೈ: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನಾಂಗಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ವಂಚಿತ್ ಬಹುಜನ ಅಗಾದಿ (ವಿಬಿಎ) ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಅಭಿಪ್ರಾಯ ಪಟ್ಟಿದ್ದಾರೆ. ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಪ್ರತಿಭಟಿಸಿ ವಿಬಿಎ ಸದಸ್ಯರು ಇಲ್ಲಿ ದಾದರ್‌ನಲ್ಲಿ ಮೌನ ಪ್ರತಿಭಟನೆ ನಡೆಸಿದರು.

ಎನ್‌ಆರ್‌ಸಿ ಮತ್ತು ಸಿಎಎ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಇದು ಕೇವಲ ಮುಸ್ಲಿಮರ ಮೇಲೆ ಮಾತ್ರ ಪರಿಣಾಮ ಬೀರುವುದಲ್ಲ. ಬದಲಾಗಿ ಇದರಿಂದ ಹಲವಾರು ಹಿಂದೂಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನಾಂಗ ಈ ಕಾನೂನುಗಳಿಂದ ಪ್ರಭಾವಿತರಾಗುತ್ತಾರೆ. ಈ ಕಾನೂನು ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯವನ್ನು ಮಾತ್ರ ಗುರಿಯಾಗಿಸುತ್ತದೆ ಎಂದು ಕಾಂಗ್ರೆಸ್-ಎನ್‌ಸಿಪಿ ತಪ್ಪಾಗಿ ಹೇಳುತ್ತಿದೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.