ಸನ್ಮಾರ್ಗ ವಾರ್ತೆ
ಹೊಸದಿಲ್ಲಿ,ಆ.12: ಕೊರೋನ ಪೀಡಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯ ಆರೋಗ್ಯ ಸ್ಥಿತಿ ತೀರ ಗಂಭೀರವಾಗಿದೆ ಎಂದು ವರದಿಯಾಗಿದೆ.
ದಿಲ್ಲಿಯಲ್ಲಿ ಆರ್.ಆರ್ ಸೈನಿಕಾಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಪರಿಸ್ಥಿತಿಯಲ್ಲಿ ಸೋಮವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಪರೀಕ್ಷೆ ಮಾಡಿದಾಗ ಕೊರೋನ ದೃಢಪಟ್ಟಿತ್ತು.
ಶಸ್ತ್ರಕ್ರಿಯೆಯ ಮೂಲಕ ತಲೆಯಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ಹೊರತೆಗೆದರೂ ಪ್ರಗತಿಯಾಗಿಲ್ಲ. ಆರೋಗ್ಯ ಸ್ಥಿತಿ ಸುಧಾರಿಸಿಲ್ಲ ಎಂದು ಸೈನಿಕ ಆಸ್ಪತ್ರೆಯ ಬುಲೆಟಿನ್ ತಿಳಿಸಿದೆ.
84 ವರ್ಷದ ಪ್ರಣವ್ ಮುಖರ್ಜಿ ಈಗ ವೆಂಟಿಲೇಟರ್ನಲ್ಲಿದ್ದಾರೆ. ತನಗೆ ಕೊರೋನ ದೃಢಪಟ್ಟಿರುವುದನ್ನು ಅವರು ಟ್ವೀಟ್ ಮಾಡಿ ತಿಳಿಸಿದ್ದರು. ತನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ಗೆ ಒಳಗಾಗಬೇಕೆಂದು ಅವರು ಆಗ್ರಹಿಸಿದ್ದರು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೋಮವಾರ ಅವರನ್ನು ಸಂದರ್ಶಿಸಿದ್ದರು.
ಓದುಗರೇ, ಸನ್ಮಾರ್ಗ ಫೇಸ್ಬುಕ್ ಪೇಜ್ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












