ಸನ್ಮಾರ್ಗ ವಾರ್ತೆ
ಮುಂಬೈ: ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಪರಿಷ್ಕರಣೆಯಾಗಿದ್ದು, ಸತತ ನಾಲ್ಕು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ಶುಕ್ರವಾರ ಪೆಟ್ರೋಲಿಯಂ ಉತ್ಪನ್ನಗಳು ಮತ್ತೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.54 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.13 ರೂಪಾಯಿ ಇದೆ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.88 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.19 ರೂಪಾಯಿ ಹಾಗೂ ಲೀಟರ್ ಡಿಸೆಲ್ ದರ 95.19 ರೂಪಾಯಿದೆ ಏರಿಕೆಯಾಗಿದೆ.
ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 10098 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.56 ರೂಪಾಯಿಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 1071 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.74 ರೂಪಾಯಿಗೆ ಏರಿಕೆ ಆಗಿದೆ.












