ನೀಟ್, ಯುಜಿಸಿ ನೆಟ್ ಪರೀಕ್ಷೆ ಅಕ್ರಮ ವಿರೋಧಿಸಿ ಎಸ್‌ಐಓ ಪಾಣೆಮಂಗಳೂರು ಶಾಖೆಯ ವತಿಯಿಂದ ಪ್ರತಿಭಟನೆ

0
192

ಸನ್ಮಾರ್ಗ ವಾರ್ತೆ

ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್‌ಐಓ ಪಾಣೆಮಂಗಳೂರು ಶಾಖೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ನ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ರಾಷ್ಟ್ರೀಯ ಮಟ್ಟದ ಉನ್ನತ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಹಾಗೂ ಈ ಅವ್ಯವಹಾರಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NTA)ದ ಪಾತ್ರದ ಕುರಿತು ತನಿಖೆ ನಡೆಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾನೂನು ವಿದ್ಯಾರ್ಥಿ  ನಿಹಾಲ್ ಕುದ್ರೋಳಿ , ಜಿಲ್ಲಾ ಕಾರ್ಯದರ್ಶಿ  ಸಲ್ವಾನ್ ಬೋಳಂಗಡಿ, ಪಾಣೆಮಂಗಳೂರು ಶಾಖಾಧ್ಯಕ್ಷ  ಮುತಹ್ಹರ್ ಮಾತನಾಡಿದರು.

ಇನ್ನು ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಹಲವಾರು ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ. ಇತ್ತೀಚೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್‌ಎಫ್‌ಐ ಯುಜಿಸಿ-ನೀಟ್ ಪರೀಕ್ಷೆ ಭ್ರಷ್ಟಾಚಾರದ ಹಗರಣ ವಿರೋಧಿಸಿ, ರಾಷ್ಟ್ರಿಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ಹಾಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯನ್ನು ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಜಾರಿಗಾಗಿ ಒತ್ತಾಯಿಸಿ ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದೆ.