ಸನ್ಮಾರ್ಗ ವಾರ್ತೆ
ರಾಯಚೂರು: ರಾಯಚೂರು ವಿಶ್ವವಿದ್ಯಾಲಯದ ಸೂಕ್ತ ನಿರ್ವಹಣೆಗಾಗಿ ಬರುವ ರಾಜ್ಯ ಬಜೆಟ್‌ನಲ್ಲಿ ಅನುದಾನ ಒದಗಿಸಲು ಆಗ್ರಹಿಸಿ ಎಸ್.ಐ.ಓ ಲಿಂಗಸೂಗೂರು ಘಟಕದ ವತಿಯಿಂದ ಪ್ರತಿಭಟನಾ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ಜಾಥಾದಲ್ಲಿ ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ವಿವಿಯು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಆಗ್ರಹ ಪತ್ರವನ್ನು ಎಸ್.ಐ.ಓ ಲಿಂಗಸೂಗೂರು ಘಟಕದ ಅಧ್ಯಕ್ಷರಾದ ಅಬ್ದುಲ್ ವದೂದ್ ಅವರು ಮಾನ್ಯ ಸಹಾಯಕ ಆಯುಕ್ತರು ಇವರ ಮುಖಾಂತರ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಪೀರ್ ಲಟಗೇರಿ ಅವರು ವಿಶ್ವವಿದ್ಯಾಲಯದ ಸೂಕ್ತ ನಿರ್ವಹಣೆಗಾಗಿ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಎಸ್‌ಐಓ ಜಿಲ್ಲಾ ಕಾರ್ಯದರ್ಶಿ ಅಮೀರ್ ಮತ್ತು ಕಾರ್ಯದರ್ಶಿ ನಹೀಮ್ ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.















