ಪಿ.ಯು.ಸಿ ವಿದ್ಯಾರ್ಥಿಗಳ ದತ್ತಾಂಶ ಸೋರಿಕೆ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ – ಎಸ್.ಐ.ಓ ಆಗ್ರಹ

0
599

ಬೆಂಗಳೂರು: ನ. 26- ಪಿ.ಯು.ಸಿ ವಿದ್ಯಾರ್ಥಿಗಳ ಖಾಸಗಿ ದತ್ತಾಂಶಗಳು ಸೋರಿಕೆಯಾಗಿರುವ ಬಗ್ಗೆ ಪತ್ರಿಕೆಗಳಲ್ಲಿ ವರದಿ ಬಿತ್ತರವಾಗಿದ್ದು ಈ ಬಗ್ಗೆ ಉನ್ನತ ತನಿಖೆಯಾಗಬೇಕು ಮತ್ತು ತನಿಖೆಯ ನಂತರದ ವರದಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕೆಂದು ಎಸ್.ಐ.ಓ ಕರ್ನಾಟಕ ಆಗ್ರಹಿಸುತ್ತದೆ.

ಸಿ.ಇ.ಟಿ ಮತ್ತು ನೀಟ್ ಪರೀಕ್ಷೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ದಾಖಲಾತಿಗೆ ಸಂಬಂಧಿಸಿದಂತೆ ಮೊಬೈಲ್ ಸಂದೇಶಗಳು ಬರುತ್ತಿದ್ದು ಉನ್ನತ ರ಼್ಯಾಂಕ್ ಮತ್ತು ಕಡಿಮೆ ರ಼್ಯಾಂಕ್ ಹೊಂದಿರುವ ವಿದ್ಯಾರ್ಥಿಗಳ ನ್ನು ಗುರಿಯಾಗಿಸಿಕೊಂಡು ಶಿಕ್ಷಣ ಸಂಸ್ಥೆಗಳ ಮಧ್ಯವರ್ತಿಗಳು ಸಂದೇಶ ರವಾನಿಸುತ್ತಿದ್ದಾರೆ. ಪತ್ರಿಕಾ ವರದಿಯ ಪ್ರಕಾರ ವಿದ್ಯಾರ್ಥಿಗಳ ಶ್ರೈಕ್ಷಣಿಕ ಮಾಹಿತಿ, ಕುಟುಂಬದ ಹಿನ್ನಲೆ, ಸಂಪರ್ಕ ಮಾಹಿತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಸ್ಥಾನಗಳ ಮಾಹಿತಿಗಳು ಸೋರಿಕೆಯಾದ ಬಗ್ಗೆ ತಿಳಿದು ಬಂದಿದೆ.

ಈ ಕೃತ್ಯದ ಹಿಂದಿರುವ ಮಧ್ಯವರ್ತಿಗಳು, ಇದರಲ್ಲಿ ಪಾಲ್ಘೊಂಡಿರುವ ಸರಕಾರಿ ಅಧಿಕಾರಿಗಳ ಕೈವಾಡದ ಬಗ್ಗೆ ಉನ್ನತ ಮಟ್ಟದ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅದರೊಂದಿಗೆ ರಾಜ್ಯ ಸರಕಾರ ವಿದ್ಯಾರ್ಥಿಗಳ ಖಾಸಗಿ ಮಾಹಿತಿಗಳು ಸೋರಿಕೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಎಸ್.ಐ.ಓ ಕರ್ನಾಟಕ ಆಗ್ರಹಿಸುತ್ತದೆ.