ಸನ್ಮಾರ್ಗ ವಾರ್ತೆ
ಮಂಗಳೂರು: ದೆಹಲಿಯಲ್ಲಿ ನಡೆಯಲಿರುವ 2023ನೇ ಸಾಲಿನ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾ ಬಾನು ಆಯ್ಕೆಯಾಗಿದ್ದಾರೆ.
ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ.
ವಜೀದಾರವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಗಳ ಪುತ್ರಿ. ಇವರು ಎ.ಜೆ ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿರುತ್ತಾರೆ.
ಇತ್ತೀಚೆಗೆ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಪ್ರಸ್ತಕ ಸಾಲಿನ ಆರು ವಿಷಯಗಳಲ್ಲಿ ರ್ಯಾಂಕ್ ಪಡೆದಿರುತ್ತಾರೆ. ಪುತ್ತೂರು ಕಮ್ಯೂನಿಟಿ ಸೆಂಟರ್ನ ಕೌನ್ಸಿಲರ್ ಆಗಿರುವ ಇವರು ಹಲವಾರು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಪ್ರೇರಣೆ ನೀಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದ್ದಾರೆ ಎಂದು ಪುತ್ತೂರು ಕಮ್ಯೂನಿಟಿ ಸೆಂಟರ್ನ ಪ್ರಧಾನ ಕಾರ್ಯದರ್ಶಿ ಹನೀಫ್ ಪುತ್ತೂರು ತಿಳಿಸಿದ್ದಾರೆ.












