ಹೆಚ್ಚುತ್ತಿರುವ ಕೊರೋನಾ: ಪಶ್ಚಿಮಬಂಗಾಳದ ನನ್ನ ಎಲ್ಲಾ ರ‍್ಯಾಲಿ ರದ್ದುಪಡಿಸುತ್ತೇನೆಂದ ರಾಹುಲ್ ಗಾಂಧಿ

0
611

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನ ವೈರಸ್ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿ ತಾನು ಭಾಗವಹಿಸಬೇಕಾಗಿದ್ದ ಎಲ್ಲ ರ‍್ಯಾಲಿಗಳನ್ನು ರದ್ದುಪಡಿಸುವುದಾಗಿ ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದಾರೆ.

ಕೋವಿಡ್ ಪರಿಸ್ಥಿತಿಯ ದೃಷ್ಟಿಯಿಂದ ಪಶ್ಚಿಮ ಬಂಗಾಳದಲ್ಲಿ ನನ್ನ ಎಲ್ಲ ಸಾರ್ವಜನಿಕ ರ‍್ಯಾಲಿಗಳನ್ನು ಸ್ಥಗಿತಗೊಳಿಸುತ್ತಿದ್ದೇನೆ. ಪ್ರಸ್ತುತ ಸಂದರ್ಭಗಳಲ್ಲಿ ದೊಡ್ಡ ಸಾರ್ವಜನಿಕ ರ‍್ಯಾಲಿಗಳನ್ನು ನಡೆಸುವ ಪರಿಣಾಮಗಳ ಬಗ್ಗೆ ಎಲ್ಲ ರಾಜಕೀಯ ಮುಖಂಡರು ಆಳವಾಗಿ ಯೋಚಿಸುವಂತೆ ಸಲಹೆ ನೀಡುತ್ತೇನೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.