ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸದಂತೆ ನೋಡಿಕೊಳ್ಳುತ್ತಿರುವುದು ಮೋದಿಯವರ ಅಜೆಂಡಾ: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

0
14

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ: ದೇಶದಲ್ಲಿ ತಾಂಡವವಾಡುತ್ತಿರುವ ನಿರುದ್ಯೋಗ ಸಮಸ್ಯೆ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಸರಕು ಮತ್ತು ಸೇವಾ ತೆರಿಗೆ ಸೇರಿದಂತೆ
ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಬಾರದು ಎಂಬುದೊಂದೇ ಮೋದಿಯವರ ಅಜೆಂಡಾವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದರು.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಹಲವು ವಿಷಯಗಳ ಕುರಿತು ಮಾತನಾಡಿ ಎಂದಿನಂತೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಭಾರತವು “ಪ್ರಜಾಪ್ರಭುತ್ವದ ಸಾವಿಗೆ” ಸಾಕ್ಷಿಯಾಗುತ್ತಿದೆ. ಕೇಂದ್ರದ, ಪ್ರಧಾನಿ ಮೋದಿಯವರು ಸರ್ವಾಧಿಕಾರದ ಆಕ್ರಮಣದ ವಿರುದ್ಧ ನಿಲ್ಲುವ ಯಾರಾದರೂ ಕೆಟ್ಟ ದಾಳಿಗೆ ಒಳಗಾಗುತ್ತಾರೆ ಎಂದು ಆರೋಪಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಮತ್ತು ಸಮಾಜದಲ್ಲಿನ ಹಿಂಸಾಚಾರದಂತಹ ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಬಾರದು ಎಂಬುದು ಸರ್ಕಾರದ ಏಕೈಕ ಅಜೆಂಡಾ. ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ, ನಾಲ್ಕು ಜನರ ಸರ್ವಾಧಿಕಾರವಿದೆ ಎಂದು ನೇರವಾಗಿ ಆರೋಪಿಸಿದರು.

ನಾವು ಈಗ ದೇಶದಲ್ಲಿ ಪ್ರಜಾಪ್ರಭುತ್ವದ ಸಾವನ್ನು ನೋಡುತ್ತಿದ್ದೇವೆ. ಅದಕ್ಕೆ ಭಾರತ ಸಾಕ್ಷಿಯಾಗುತ್ತಿದೆ. ಸುಮಾರು ಒಂದು ಶತಮಾನದ ಹಿಂದೆ ಭಾರತವು ಇಟ್ಟಿಗೆಯ ಮೇಲೆ ಇಟ್ಟಿಗೆ ಇಟ್ಟಂತೆ ನಿರ್ಮಾಣವಾಯಿತು. ಅದು ಈಗ ನಿಮ್ಮ ಕಣ್ಣುಗಳ ಮುಂದೆ ನಾಶವಾಗುತ್ತಿದೆ ಆರೋಪಿಸಿದರು.

ಮೋದಿಯವರ ಸರ್ವಾಧಿಕಾರದ ಕಲ್ಪನೆಯ ವಿರುದ್ಧ ನಿಲ್ಲುವ ಯಾರೇ ಆಗಿದ್ದರೂ ಅವನು ಯಾರು, ಅವನು ಎಲ್ಲಿಂದ ಬಂದವನು, ಯಾವ ರಾಜ್ಯ, ಯಾವ ಧರ್ಮ, ಗಂಡು ಅಥವಾ ಹೆಣ್ಣು ಎಂಬುದು ನೋಡದೆ ಆ ವ್ಯಕ್ತಿಯನ್ನು ಕೆಟ್ಟದಾಗಿ ಹಲ್ಲೆ ಮಾಡಲಾಗುತ್ತದೆ, ಜೈಲಿಗೆ ಹಾಕಲಾಗುತ್ತದೆ, ಬಂಧಿಸಲಾಗುತ್ತದೆ, ಥಳಿಸಲಾಗುತ್ತದೆ.

ಬೆಲೆ ಏರಿಕೆಯಾಗಲಿ, ನಿರುದ್ಯೋಗವಾಗಲಿ ಅಥವಾ ಸಮಾಜದಲ್ಲಿನ ಹಿಂಸಾಚಾರವಾಗಲಿ ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಬಾರದು ಎಂಬುದೊಂದೇ ಮೋದಿಯವರ ಅಜೆಂಡಾವಾಗಿದೆ. ನಾಲ್ಕೈದು ಜನರ ಹಿತಾಸಕ್ತಿ ಕಾಪಾಡಲು ಸರ್ಕಾರ ನಡೆಸುತ್ತಿದ್ದು, ‘ಇಬ್ಬರು ಮೂವರು ದೊಡ್ಡ ಉದ್ಯಮಿಗಳ ಹಿತಾಸಕ್ತಿಯಿಂದ ಸರ್ವಾಧಿಕಾರ ನಡೆಸಲಾಗುತ್ತಿದೆ ಎಂದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ತಮ್ಮನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿರುವ ಕುರಿತು ಕೇಳಿದಾಗ, ಈ ಕೇಸಿನಲ್ಲಿ ವಿಚಾರಣೆ ಮಾಡುವಂತಹದ್ದು ಏನೂ ಇಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಆರ್‌ಎಸ್‌ಎಸ್‌ನ ಕಲ್ಪನೆಯನ್ನು ವಿರೋಧಿಸುವುದು ನನ್ನ ಕೆಲಸ. ನಾನು ಅದನ್ನು ಎಷ್ಟು ಹೆಚ್ಚು ಮಾಡುತ್ತೇನೋ ಅಷ್ಟು ಹೆಚ್ಚು ನನ್ನ ಮೇಲೆ ದಾಳಿಯಾಗುತ್ತದೆ, ಸಂತೋಷ, ನನ್ನ ವಿರುದ್ಧ ದಾಳಿ ಮುಂದುವರಿಸಿ ಎಂದರು. ಸರ್ಕಾರ ನನ್ನನ್ನು ಹೆದರಿಸಲು, ಬೆದರಿಸಲು ನೋಡಿದರೆ ಅದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದರು.

ನಾವು ಸಿದ್ಧಾಂತಕ್ಕಾಗಿ ಹೋರಾಡುತ್ತೇವೆ. ನಮ್ಮಂತಹ ಕೋಟಿಗಟ್ಟಲೆ ಜನರು ಇದ್ದಾರೆ ಎಂಬ ಕಾರಣಕ್ಕಾಗಿ ಮೋದಿ ಮತ್ತು ಅವರ ತಂಡ ಗಾಂಧಿ ಕುಟುಂಬದ ಮೇಲೆ ಎರಗಿ ಬೀಳುತ್ತಿದ್ದಾರೆ. ನಾವು ಪ್ರಜಾಪ್ರಭುತ್ವಕ್ಕಾಗಿ, ಕೋಮು ಸೌಹಾರ್ದಕ್ಕಾಗಿ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಮತ್ತು ಸಮಾಜದಲ್ಲಿನ ಹಿಂಸಾಚಾರದಂತಹ ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಬಾರದು ಎಂಬುದು ಸರ್ಕಾರದ ಏಕೈಕ ಅಜೆಂಡಾ. ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ, ನಾಲ್ಕು ಜನರ ಸರ್ವಾಧಿಕಾರವಿದೆ ಎಂದು ಹೇಳಿದರು.

ನಾವು ಈಗ ದೇಶದಲ್ಲಿ ಪ್ರಜಾಪ್ರಭುತ್ವದ ಸಾವನ್ನು ನೋಡುತ್ತಿದ್ದೇವೆ. ಅದಕ್ಕೆ ಭಾರತ ಸಾಕ್ಷಿಯಾಗುತ್ತಿದೆ. ಸುಮಾರು ಒಂದು ಶತಮಾನದ ಹಿಂದೆ ಭಾರತವು ಇಟ್ಟಿಗೆಯ ಮೇಲೆ ಇಟ್ಟಿಗೆ ಇಟ್ಟಂತೆ ನಿರ್ಮಾಣವಾಯಿತು. ಅದು ಈಗ ನಿಮ್ಮ ಕಣ್ಣುಗಳ ಮುಂದೆ ನಾಶವಾಗುತ್ತಿದೆ ಆರೋಪಿಸಿದರು.

ಮೋದಿಯವರ ಸರ್ವಾಧಿಕಾರದ ಕಲ್ಪನೆಯ ವಿರುದ್ಧ ನಿಲ್ಲುವ ಯಾರೇ ಆಗಿದ್ದರೂ ಅವನು ಯಾರು, ಅವನು ಎಲ್ಲಿಂದ ಬಂದವನು, ಯಾವ ರಾಜ್ಯ, ಯಾವ ಧರ್ಮ, ಗಂಡು ಅಥವಾ ಹೆಣ್ಣು ಎಂಬುದು ನೋಡದೆ ಆ ವ್ಯಕ್ತಿಯನ್ನು ಕೆಟ್ಟದಾಗಿ ಹಲ್ಲೆ ಮಾಡಲಾಗುತ್ತದೆ, ಜೈಲಿಗೆ ಹಾಕಲಾಗುತ್ತದೆ, ಬಂಧಿಸಲಾಗುತ್ತದೆ, ಥಳಿಸಲಾಗುತ್ತದೆ.

ಬೆಲೆ ಏರಿಕೆಯಾಗಲಿ, ನಿರುದ್ಯೋಗವಾಗಲಿ ಅಥವಾ ಸಮಾಜದಲ್ಲಿನ ಹಿಂಸಾಚಾರವಾಗಲಿ ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಬಾರದು ಎಂಬುದೊಂದೇ ಮೋದಿಯವರ ಅಜೆಂಡಾವಾಗಿದೆ. ಇಬ್ಬರು ಮೂವರು ದೊಡ್ಡ ಉದ್ಯಮಿಗಳ ಹಿತಾಸಕ್ತಿಯಿಂದ ಸರ್ವಾಧಿಕಾರ ನಡೆಸಲಾಗುತ್ತಿದೆ ಎಂದರು.

LEAVE A REPLY

Please enter your comment!
Please enter your name here