Home ಸುದ್ದಿ ಡಿಸೆಂಬರ್ 15 ರಂದು ರಾಜ್ಯ ಮಟ್ಟದ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ವಿಚಾರಗೋಷ್ಠಿ
2016 ನೇ ಸಾಲಿನ ರಾಜ್ಯ ಮಟ್ಟದ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿಯನ್ನು ಡಾ. ಕಲೀಮುಲ್ಲಾರವರ ಕ್ಲಾಸ್ ಟೀಚರ್ ಕೃತಿಯು ಪಡೆದುಕೊಂಡಿದ್ದು ಪ್ರಶಸ್ತಿ ಪ್ರಧಾನ ಸಮಾರಂಭವು ಡಿಸೆಂಬರ್ 15 ರ ಶನಿವಾರದಂದು ಸಾಯಂಕಾಲ 4:30ಕ್ಕೆ ಶಿವಮೊಗ್ಗದ ಕಮಲಾ ನೆಹರು ಮಹಿಳಾ ಕಾಲೇಜಿನ ಕುವೆಂಪು ಸಭಾಗಂಣದಲ್ಲಿ ನಡೆಯಲಿದೆ.
ಮಾಜಿ ಸಚಿವ ಕಿಮ್ಮನೆ ರತ್ನಾಕರರವರು ಪ್ರಶಸ್ತಿ ಪ್ರದಾನ ಮಾಡಲಿದ್ದು ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾದ ಕೆ.ಎಲ್. ಅಶೋಕ, ಫ್ರಂಟ್ ಲೈನ್ ಹಿರಿಯ ಸಹಾಯಕ ಸಂಪಾದಕರಾದ ಜನಾಬ್ ವಿಖಾರ್ ಅಹ್ಮದ್ ಸಈದ್ ರವರು ಭಾಗವಹಿಸಲಿರುವರು.

ಈ ಸಂದರ್ಭದಲ್ಲಿ “ಬಹುತ್ವ ಭಾರತದ ಮುಂದಿರುವ ಸವಾಲುಗಳು” ಎಂಬ ವಿಷಯದಲ್ಲಿ ವಿಚಾರ ಗೋಷ್ಠಿ ನಡೆಯಲಿದ್ದು, ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು( ಪಟ್ಟಾಧ್ಯಕ್ಷರು, ಶ್ರೀ ತರಳಬಾಳು ಜಗದ್ಗುರು ಶಾಖಾಮಠ,ಸಾಣೇಹಳ್ಳಿ) ಮುಖ್ಯ ಭಾಷಣ ಮಾಡಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷರಾದ ಉಮರ್ ಯು ಹೆಚ್ ರವರು ವಹಿಸಲಿದ್ದು ಈ ಕಾರ್ಯಕ್ರಮದಲ್ಲಿ ಬಂಧು ಮಿತ್ರರೊಂದಿಗೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.