ಸನ್ಮಾರ್ಗ ವಾರ್ತೆ
ಕೊಲ್ಕತ್ತಾ: ಚುನಾವಣೆಯ ಕಾರಣದಿಂದ ಪೆಟ್ರೋಲ್ ಬಂಕ್ ಗಳಲ್ಲಿರುವ ಪ್ರಧಾನಿ ಮೋದಿಯವರ ಫೋಟೋಗಳಿರುವ ಜಾಹೀರಾತು ಫಲಕಗಳನ್ನು ತೆರವುಗೊಳಿಸಬೇಕೆಂದು ಚುನಾವಣಾ ಆಯೋಗ ಸೂಚಿಸಿದೆ.
72 ಗಂಟೆಗಳೊಳಗೆ ಅದನ್ನು ತೆರವುಗೊಳಿಸಬೇಕಾಗಿದೆ. ಫಲಕಗಳು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ.
ಮೋದಿಯ ಚಿತ್ರ ಅಂಟಿಸಿದ ಫಲಕಗಳು ತೆರವುಗೊಳಿಸಬೇಕೆಂದು ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಫಲಕಗಳು ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಹೇಳುತ್ತದೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ತೃಣಮೂಲ ಕಾಂಗ್ರೆಸ್ ದೂರಿನಲ್ಲಿ ಹೇಳಿತ್ತು. ನಂತರ ಚುನಾವಣಾ ಆಯೋಗ ಫಲಕ ತೆರವಿಗೆ ಸೂಚಿಸಿದೆ.
ಫೆ. 26ಕ್ಕೆ ಚುನಾವಣೆ ಘೋಷಣೆಯಾಗಿದ್ದು, ತದನಂತರ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.
ಮಾರ್ಚ್ 27, ಎಪ್ರಿಲ್ 1,6,10,17,22,26,29ಕ್ಕೆ ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ನಡೆಯಲಿದೆ ಎಂದು ಇತ್ತೀಚಿಗೆ ಕೇಂದ್ರ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿತ್ತು.












