ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ: ಮಂಗಳೂರು ಮೂಲದ ಮೂವರು ಸೇರಿ ನಾಲ್ವರ ದುರ್ಮರಣ.

0
135

ಸನ್ಮಾರ್ಗ ವಾರ್ತೆ

ರಿಯಾದ್: ಸೌದಿ ಅರೇಬಿಯಾದ ಅಲ್ ಹಸ ಎಂಬಲ್ಲಿ ಫೆಬ್ರವರಿ,೪ ರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಿಲುಕಿ ಮಂಗಳೂರು ಮೂಲದ ಮೂವರು ಸೇರಿ ನಾಲ್ವರು ಬಲಿಯಾಗಿದ್ದಾರೆ. ಮೃತಪಟ್ಟವರೆಲ್ಲ saqco ಕಂಪನಿಗೆ ಸೇರಿದವರೆನ್ನಲಾಗಿದೆ. ಮೃತರಲ್ಲಿ ಓರ್ವ ಬಾಂಗ್ಲಾದೇಶದ ಯುವಕ ಕೂಡ ಸೇರಿದ್ದಾನೆ ಎಂದು ತಿಳಿದು ಬಂದಿದೆ.

ನಾಲ್ವರು ಕಾರಲ್ಲಿ ಸಂಚರಿಸುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ಒಂಟೆಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ಅಕೀಲ್, ನಾಸಿರ್, ರಿಝ್ವಾನ್, ಶಿಹಾಬ್ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದೆ. ಅಕೀಲ್ ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಝ್ವಾನ್ ಹಳೆಯಂಗಡಿ ಕದಿಕೆ ನಿವಾಸಿ ಎಂದು ತಿಳಿದುಬಂದಿದೆ.