ಸೆಲ್ಫಿ ವಿವಾದ: ನಿಷ್ಠಾವಂತ ಪೊಲೀಸರ ವೃತ್ತಿಜೀವನವನ್ನು ಹಾಳು ಮಾಡುವುದು ಸರ್ಕಾರಕ್ಕೆ ಶೋಭೆ ನೀಡುವುದಿಲ್ಲ- ಪ್ರಿಯಾಂಕಾ ಗಾಂಧಿ

0
440

ಸನ್ಮಾರ್ಗ ವಾರ್ತೆ

ನವದೆಹಲಿ:ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಜೊತೆ ಸೆಲ್ಫಿ ತೆಗೆಸಿಕೊಂಡ ಮಹಿಳಾ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಜರಗಿಸಲು ಉತ್ತರಪ್ರದೇಶ ಸರಕಾರ ಸೂಚನೆ ನೀಡಿದೆ ಎಂದು ವರದಿಯಾಗಿದ ಬೆನ್ನಿಗೆ ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿದ್ದು, ಸರಕಾರದ ಕ್ರಮವನ್ನು ಖಂಡಿಸಿದ್ದಾರೆ.

“ಈ ಚಿತ್ರದಿಂದ ಯೋಗಿಜಿ ಬಹಳ ಅಸಮಾಧಾನಗೊಂಡಿದ್ದಾರೆ ಎಂದು ಸುದ್ದಿ ಬರುತ್ತಿದೆ. ಅವರು ಈ ಮಹಿಳಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಬಯಸುತ್ತಾರೆ. ಹಾಗೊಂದು ವೇಳೆ ನನ್ನೊಂದಿಗೆ ಫೋಟೋ ತೆಗೆದುಕೊಳ್ಳುವುದು ಅಪರಾಧವಾಗಿದ್ದರೆ, ಅದಕ್ಕೆ ನಾನು ಶಿಕ್ಷೆ ಅನುಭವಿಸಬೇಕು, ಈ ಶ್ರಮಜೀವಿ ಮತ್ತು ನಿಷ್ಠಾವಂತ ಪೊಲೀಸರ ವೃತ್ತಿಜೀವನವನ್ನು ಹಾಳು ಮಾಡುವುದು ಸರ್ಕಾರಕ್ಕೆ ಶೋಭೆ ನೀಡುವುದಿಲ್ಲ” ಎಂದು ಅವರು ಟ್ವೀಟ್ ಮೂಲಕ ಉ.ಪ್ರದೇಶ ಸರಕಾರದ ವಿರೋಧಿ ಧೋರಣೆಯನ್ನು ಖಂಡಿಸಿದ್ದಾರೆ.