ಡಿನೋಟಿಫಿಕೇಶನ್ ಪ್ರಕರಣದಲ್ಲಿ ರಾಜ್ಯ ಸರಕಾರಕ್ಕೆ ಹಿನ್ನಡೆ: ಸಿಎಂ ಯಡಿಯೂರಪ್ಪ ರಾಜೀನಾಮೆಗೆ ವೆಲ್ಫೇರ್ ಪಾರ್ಟಿ ಆಗ್ರಹ

0
601

ಸನ್ಮಾರ್ಗ ವಾರ್ತೆ

ಬೆಂಗಳೂರು: ಡಿನೋಟಿಫಿಕೇಶನ್ ಪ್ರಕರಣ ರದ್ದುಗೊಳಿಸಲು ಉಚ್ಚ ನ್ಯಾಯಾಲಯ ನಿರಾಕರಿಸಿರುವುದು ರಾಜ್ಯ ಸರಕಾರಕ್ಕೆ ಭಾರೀ ಹಿನ್ನಡೆಯನ್ನು ನೀಡಿದೆ. ಕೂಡಲೇ ಮುಖ್ಯಮಂತ್ರಿ ಬಿಎಸ್‌ವೈ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೀರ್ ಹುಸೇನ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ ವಿರುದ್ದ ಡಿನೋಟಿಫಿಕೇಷನ್ ಆರೋಪ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ, ಲೋಕಾಯುಕ್ತ ಪೊಲೀಸರ ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ.

ಇದೇ ವೇಳೆ ತಮ್ಮ ವಿರುದ್ದ ಕೇಳಿ ಬಂದಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ದಾಖಲಾಗಿದ್ದ, ಎಫ್‌ಐಆರ್ ಅನ್ನು ಕೂಡ ರಾಜ್ಯ ಹೈಕೋರ್ಟ್‌ ನಿರಾಕರಿಸಿದ್ದು, ತನಿಖೆಯನ್ನು ಮುಂದುವರೆಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದ್ದಾರೆ.