ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಇದುವರೆಗೆ 1,511 ಕೋಟಿ ರೂ. ಸಂಗ್ರಹ: ವರದಿ

0
328

ಸನ್ಮಾರ್ಗ ವಾರ್ತೆ

ಸೂರತ್: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ದೇಣಿಗೆ ಸಂಗ್ರಹ ನಡೆಸುತ್ತಿದ್ದು, ಇದುವರೆಗೂ 1,511 ಕೋಟಿ ರೂಪಾಯಿ ಸಂಗ್ರಹವಾಗಿರುವುದಾಗಿ ವರದಿಯಾಗಿದೆ.

ದೇಗುಲ ನಿರ್ಮಾಣಕ್ಕೆ ಜನವರಿ 15ರಂದು ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದ್ದು, ಫೆಬ್ರುವರಿ 27ರವರೆಗೂ ಮುಂದುವರೆಯಲಿದೆ. ಫೆ.11ರ ಗುರುವಾರ ಸಂಜೆಯವರೆಗೂ 1,511ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂಬುದಾಗಿ ಟ್ರಸ್ಟ್‌ ಖಜಾಂಚಿ ಸ್ವಾಮಿ ಗೋವಿಂದ ದೇವ್ ಗಿರಿ ಮಾಹಿತಿ ನೀಡಿದ್ದಾರೆ.