ರಾಮ ಮಂದಿರಕ್ಕಾಗಿ ಬಿಜೆಪಿ ಸಂಗ್ರಹಿಸಿದ್ದ ಇಟ್ಟಿಗೆಯ ಲೆಕ್ಕ ಎಲ್ಲಿ: ಸಿದ್ದರಾಮಯ್ಯ ಟ್ವೀಟ್

0
387

ಸನ್ಮಾರ್ಗ ವಾರ್ತೆ

ಬೆಂಗಳೂರು: ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹಿಸುತ್ತಿರುವ ಹಣದ ವಿಚಾರವಾಗಿ ಬಿಜೆಪಿಯನ್ನು ಪ್ರಶ್ನೆ ಮಾಡಿರುವ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಮ ಮಂದಿರಕ್ಕಾಗಿ ಬಿಜೆಪಿ ಸಂಗ್ರಹಿಸಿದ್ದ ಇಟ್ಟಿಗೆಯ ಲೆಕ್ಕ ಎಲ್ಲಿ ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಪ್ರಶ್ನಿಸಿದ್ದಾರೆ.

ಸಾರ್ವಜನಿಕರಿಂದ ಹಣ ಸಂಗ್ರಹಿಸುವವವರು ಪಾರದರ್ಶಕವಾಗಿ ನಡೆದುಕೊಳ್ಳಬೇಕಾಗುತ್ತದೆ. ಪಿಎಂ ಕೇರ್ಸ್ ನಿಧಿಯ ಲೆಕ್ಕವನ್ನೇ ಕೊಡದಿರುವ ಈಗಿನ ಬಿಜೆಪಿ ಸರ್ಕಾರ ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹಿಸುವ ಹಣದ ಲೆಕ್ಕ ನೀಡುತ್ತಾ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿರುವ ಸಿದ್ದರಾಮಯ್ಯ, ರಾಮಮಂದಿರ ನಿರ್ಮಾಣಕ್ಕೆ ಯಾರ ವಿರೋಧವೂ ಇಲ್ಲ. ಆದರೆ ಇದೇ ಬಿಜೆಪಿ ಹಿಂದೊಮ್ಮೆ ರಾಮ ಮಂದಿರ ನಿರ್ಮಾಣಕ್ಕಾಗಿ ಇಟ್ಟಿಗೆ-ಹಣ ಸಂಗ್ರಹಿಸಿತ್ತಲ್ಲಾ, ಅದು ಏನಾಯಿತೆಂದು ಯಾರಿಗೂ ಗೊತ್ತಿಲ್ಲ.‌ ಅದರ ಲೆಕ್ಕವನ್ನು ಬಿಜೆಪಿ ಮೊದಲು ಸಾರ್ವಜನಿಕರಿಗೆ ನೀಡಬೇಕಾಗುತ್ತದೆ ಎಂದು ಟ್ವೀಟ್ ಮಾಡಿ ಹೇಳಿದ್ದಾರೆ.

ಬಿಪಿಎಲ್ ಕಾರ್ಡ್ ಕುರಿತು ಆಹಾರ ಸಚಿವ ಉಮೇಶ್ ಕತ್ತಿಯವರ ಹೇಳಿಕೆಗೆ ಪ್ರತಿಕ್ರಿಸಿರುವ ಸಿದ್ದರಾಮಯ್ಯ, ಬಿಪಿಎಲ್ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ನಡೆಸಿದರೆ ತಪ್ಪಲ್ಲ. ಆದರೆ ಟಿವಿ- ಬೈಕ್‌ಗಳು ಬಡತನದ ಮಾನದಂಡಗಳಲ್ಲ. ಜನ ಸಾಲ ಮಾಡಿ ಬೈಕ್ – ಟಿವಿ ಇಟ್ಕೊಂಡಿರ್ತಾರೆ, ಅವರೆಲ್ಲ ಶ್ರೀಮಂತರಾ? ಬಡವರ ಸೇವೆ ಮಾಡಲು ಮನಸ್ಸಿಲ್ಲದ ಉಮೇಶ್ ಕತ್ತಿಯಂತಹವರಿಗೆ ಮಾತ್ರ‌ ಇಂತಹ ಅಸಂಬದ್ಧ ಯೋಚನೆಗಳು ಬರುತ್ತೆ ಎಂದು ಹೇಳಿದ್ದಾರೆ.