ಸಿ ಟಿ ರವಿ ಸವಾಲಿಗೆ ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್: ಎಫ್ ಸಿ ಐ ಕಮಿಟ್ಮೆಂಟ್ ಪತ್ರ ಬಿಡುಗಡೆ

0
393

ಸನ್ಮಾರ್ಗ ವಾರ್ತೆ

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ‌ ನಾಯಕ @CTRavi_BJP ಸವಾಲು ಹಾಕಿದ್ದರು.

ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ.

ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು.

ಸಿ.ಟಿ.ರವಿ ಮತ್ತಿತರ @BJP4Karnataka ನಾಯಕರು ಮೊದಲು ಕೇಂದ್ರ @BJP4India ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ. ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.