ಬೆಳ್ಳಿ ಇಟ್ಟಿಗೆ, ಬೃಹತ್ ಸ್ಕ್ರೀನ್: ಆಗಸ್ಟ್ 5 ರಂದು ಪ್ರಧಾನಿ ಮೋದಿಯಿಂದ ರಾಮ‌ ಮಂದಿರ ಶಿಲಾನ್ಯಾಸ

0
820

ಸನ್ಮಾರ್ಗ ವಾರ್ತೆ

ನವದೆಹಲಿ,ಜು.20: ರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಶಿಲಾನ್ಯಾಸ ನೆರವೇರಲಿದೆ ಎಂದು ಮೂಲಗಳು ತಿಳಿಸಿದ್ದು, ಕೊರೋನ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡೇ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ವರದಿಯಾಗಿದೆ.

ಆಗಸ್ಟ್ 5ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು 40 ಕೆಜಿ ಬೆಳ್ಳಿ ಇಟ್ಟಿಗೆಯ ಮೂಲಕ ಶಿಲಾನ್ಯಾಸ ಕಾರ್ಯ ನೆರವೇರಿಸುವ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ.

ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಐವತ್ತು ಪ್ರಮುಖ(ವಿಐಪಿ) ವ್ಯಕ್ತಿಗಳಿಗೆ ಮಾತ್ರವೇ ಆಹ್ವಾನ ನೀಡಲಿದ್ದು, ಜನರು ಈ ಕಾರ್ಯಕ್ರಮವನ್ನು ವೀಕ್ಷಿಸಲು ಅಯೋಧ್ಯೆಯಲ್ಲಿ ಬೃಹತ್ ಸ್ಕ್ರೀನ್‌ ಗಳನ್ನು ಅಳವಡಿಸಲಾಗಿದೆ ಎಂದು ರಾಮ‌ ಮಂದಿರ ನಿರ್ಮಾಣ ತೀರ್ಥಕ್ಷೇತ್ರ ಟ್ರಸ್ಟ್ ಹೇಳಿರುವುದಾಗಿ ವರದಿಯಾಗಿದೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್‌ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.