ಸನ್ಮಾರ್ಗ ವಾರ್ತೆ
ಬೆಂಗಳೂರು: ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ, ಮಾಜಿ ಸಚಿವ, ಎಂ.ಸಿ.ಮನಗೂಳಿ ಅವರು ಅನಾರೋಗ್ಯದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಬುಧವಾರ (ಜ.27) ತಡರಾತ್ರಿ ನಿಧನರಾದರು.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಜ.9ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡ ರಾತ್ರಿ ಕೊನೆಯುಸಿರೆಳೆದರು.
ಅವರಿಗೆ ಮೂವರು ಮಕ್ಕಳಿದ್ದಾರೆ. 2 ಬಾರಿ ಶಾಸಕರಾಗಿದ್ದ ಮನಗೂಳಿ ಪ್ರಸ್ತುತ ಸಿಂಧಗಿ ಕ್ಷೇತ್ರದ ಶಾಸಕರಾಗಿದ್ದರು.
ಇವರು 1994ರಲ್ಲಿ ದೇವೇಗೌಡರ ಸಂಪುಟದಲ್ಲಿ ಮತ್ತು 2018ರಲ್ಲಿ ಮೈತ್ರಿ ಸರಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಶಾಸಕರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜಕೀಯ ಮುಖಂಡರು ಸಂತಾಪ ಸೂಚಿಸಿ, ಟ್ವೀಟ್ ಮಾಡಿದ್ದಾರೆ.
ಮಾಜಿ ಸಚಿವರು, ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀ ಎಂ.ಸಿ.ಮನಗೂಳಿ ವಿಧಿವಶರಾದ ಸುದ್ದಿ ತೀವ್ರ ಆಘಾತ ತಂದಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ
— B.S. Yediyurappa (@BSYBJP) January 28, 2021












