SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಪ್ರಜಾಪ್ರಭುತ್ವ ಉಳಿಸಿ ಆಂದೋಲನ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ರಾಷ್ಟ್ರಪತಿಗೆ ಮನವಿ

0
152

ಸನ್ಮಾರ್ಗ ವಾರ್ತೆ

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ, ಪ್ರಜಾಪ್ರಭುತ್ವ ಉಳಿಸಿ ಆಂದೋಲನ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವುದು, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯನ್ನು ಖಚಿತಪಡಿಸುವುದು ಹಾಗೂ ಅರ್ಹ ಮತದಾರರ ಹಕ್ಕುಗಳನ್ನು ಸಂರಕ್ಷಿಸುವಂತೆ ಮನವಿಯಲ್ಲಿ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ಉಳಿಸಿ ಆಂದೋಲನದ ಜಿಲ್ಲಾಧ್ಯಕ್ಷ ಫಾ. ವಿನಯ್ ಮಸ್ಕರೇನಸ್, CPIM(L) ಮುಖಂಡ ರಾಮಣ್ಣ ವಿಟ್ಲ, ವೆಲ್ಫೇರ್ ಪಾರ್ಟಿಯ ಜಿಲ್ಲಾ ಮುಖಂಡರಾದ ಮುನೀರ್ ಪದ್ರೆಂಗಿ ಮತ್ತು ಮುಹಮ್ಮದ್ ಸೈಫ್, ಎಡಿಪಿಐ ಜಿಲ್ಲಾ ಮುಖಂಡ ಅನ್ವರ್ ಸಾದತ್, ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ನೀತು ಡಿಸೋಜ, ಜಮಾಅತೆ ಇಸ್ಲಾಮೀ ಹಿಂದ್ ಮುಖಂಡ ಅಮೀನ್ ಅಹ್ಸನ್, YRA ಜಿಲ್ಲಾ ನಾಯಕ ಹಾಗೂ ವಕೀಲ ಲುಕ್ಮಾನ್ ನೆಲ್ಯಾಡಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.