ಸನ್ಮಾರ್ಗ ವಾರ್ತೆ
ಹೊನ್ನಾಳಿ, ಅಪ್ರಿಲ್ 24- ಸ್ಥಳೀಯ ಬಿಜೆಪಿ ಶಾಸಕ ಮತ್ತು ಮೈಖ್ಯಮಂತ್ರಿ ಅವರ ರಾಜಕೀಯ ಸಲಹೆಗಾರರಾದ ರೇಣುಕಾಚಾರ್ಯರು ತಾಲೂಕಿನ ಆಶಾ ಕಾರ್ಯಕರ್ತೆಯರು, ಪತ್ರಿಕಾ ವಿತರಕರು ಮತ್ತು ಇತರರಿಗೆ ಫುಡ್ ಕಿಟ್ ವಿತರಿಸುವ ಕಾರ್ಯಕ್ರಮ ಏರ್ಪಡಿಸಿದ್ದು, ಈ ಸಂದರ್ಭದಲ್ಲಿ ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದೇ ಮತ್ತೊಮ್ಮೆ ಸಾರ್ವಜನಿಕ ಸುದ್ದಿಗೆ ಒಳಗಾಗಿದ್ದಾರೆ. ತಿಂಗಳ ಹಿಂದಷ್ಟೇ ಬೆಂಬಲಿಗರ ಗುಂಪು ಕಟ್ಟಿಕೊಂಡು ನಗರದಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಯವರ ಕೆಂಗಣ್ಣಿಗೆ ಗುರಿಯಾಗಿದ್ದರು.
ಆಶಾ ಕಾರ್ಯಕರ್ತೆಯರು ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಜೊತೆಯಾಗಿ ಕುಳಿತಿರುವುದು ಮತ್ತು ರೇಣುಕಾಚಾರ್ಯ ಅವರು ಅವರನ್ನೆಲ್ಲ ಉದ್ದೇಶಿಸಿ ಮಾತಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಇದೇವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ಮೇಲೆ ಲಾಠಿ ಪ್ರಹಾರ ನಡೆಸುವ ಬದಲು ಅವರ ಮೇಲೆ ಗುಂಡಿನ ಮಳೆಗೈಯಬೇಕು ಎಂದು ಅವರು ಹೇಳಿರುವುದಾಗಿ ಪ್ರಜಾವಾಣಿ ಪತ್ರಿಕೆ ವರದಿ ಮಾಡಿದೆ.

ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












