ರೈತರ ಟ್ರ್ಯಾಕ್ಟರ್ ಗಳಿಗೆ ಪೆಟ್ರೋಲ್ ನಿರಾಕರಣೆ ಸುದ್ದಿ: ಫೇಕ್ ನ್ಯೂಸ್ ಎಂದ ಪೊಲೀಸರು

0
389

ಸನ್ಮಾರ್ಗ ವಾರ್ತೆ

ಚಂಡೀಗಡ: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ನಡೆಯಲಿರುವ ರೈತರ ಟ್ರ್ಯಾಕ್ಟರ್ ರ‌್ಯಾಲಿಯನ್ನು ಅಡ್ಡಿಪಡಿಸುವ ಸಲುವಾಗಿ ಪಂಜಾಬ್‌ನಲ್ಲಿ ಪೆಟ್ರೋಲ್ ಪಂಪ್‌ಗಳನ್ನು ಸ್ಥಗಿತಗೊಳಿಸುವ ಕುರಿತು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು ಫೇಕ್ ಆಗಿದೆ ಮತ್ತು ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚಂಡೀಗಡ ಪೊಲೀಸರು ಎಚ್ಚರಿಸಿದ್ದಾರೆ.

ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕ್ರಮ ಕೈಗೊಂಡಿದ್ದೇವೆ ಎಂದು ಪಂಜಾಬ್ ಪೊಲೀಸರ ಸೈಬರ್ ಸೆಲ್ ತಿಳಿಸಿದೆ. ಪಂಜಾಬ್‌ನಲ್ಲಿ ಪೆಟ್ರೋಲ್ ಪಂಪ್‌ಗಳನ್ನು ಮುಚ್ಚಲು ರಾಜ್ಯ ಸರ್ಕಾರ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ) ಸಾರ್ವಜನಿಕ ಸಂಪರ್ಕ ಮತ್ತು ಡಿಜಿಟಲ್ ಮಾಧ್ಯಮದ ಹೊಣೆಯಿರುವ ಅಮರ್ ದೀಪ್ ಸಿಂಗ್ ರೈ ಹೇಳಿದ್ದಾರೆ.

ನಕಲಿ ಮತ್ತು ಅನಧಿಕೃತ ಪೋಸ್ಟ್ ಅನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಿಗೆ ನೋಟಿಸ್ ಕಳುಹಿಸಲಾಗುತ್ತಿದೆ. ಸೈಬರ್ ಕ್ರೈಂ ವಿಭಾಗವು ಈ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡಿ, ವದಂತಿಯನ್ನು ಸೃಷ್ಟಿಸಿದವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದವರು ತಿಳಿಸಿದ್ದಾರೆ.