ಕ್ರೀಡೆಗಳು ನಮ್ಮನ್ನು ಸದೃಢ ಮತ್ತು ಕ್ರಿಯಾಶೀಲರನ್ನಾಗಿಸುತ್ತದೆ: ಧನ್ಯ ಎನ್ ನಾಯಕ್

0
94

ಸನ್ಮಾರ್ಗ ವಾರ್ತೆ

ಮಂಗಳೂರು: ಕ್ರೀಡೆಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಲು ಸಹಕಾರಿಯಾಗಿವೆ. ಶಾಲಾ ದಿನಗಳಲ್ಲಿ ಮಕ್ಕಳ ಮೆದುಳಿನ ಬೆಳವಣಿಗೆ ಮತ್ತು ಕ್ರಿಯಾಶೀಲರಾಗಿರಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ಸಹಾಯಕ ಪೊಲೀಸ್ ಆಯುಕ್ತರಾಗಿರಾದ ಧನ್ಯ. ಎನ್. ನಾಯಕ್ ತಿಳಿಸಿದರು. ಅವರು
ಕಣ್ಣೂರ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿರಾದ ಅಲ್ ಹಾಜಿ ಕೆ. ಬಿ. ಅಬ್ದುಲ್ ರಹಮಾನ್ ನಸೀಮಾ ವಹಿಸಿದ್ದರು. ಮೀಫ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರಾದ ಮೂಸಬ್ಬ ಪಿ ಬ್ಯಾರಿ, ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಈಶ್ವರ್ ಹಾಗೂ ಮಂಗಳೂರು ನಗರ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಭಾಗವಹಿಸಿದ್ದರು.

ಸರ್ಕಲ್ ಇನ್ಸ್ಪೆಕ್ಟರ್ ಧ್ವಜಾರೋಹಣ ನೆರವೇರಿಸಿದರು.

ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನು ನಾಲ್ಕು ವಿವಿಧ ಮನೆಗಳಾಗಿ ವಿಭಾಗಿಸಲಾಗಿತ್ತು, 4 ವಿವಿಧ ಮನೆಗಳ ಮಾರ್ಚ್ ಫಾಸ್ಟ್ ನೊಂದಿಗೆ ಪ್ರಾರಂಭವಾಯಿತು. ಅತಿಥಿಗಳು ಕ್ರೀಡೆ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಮೀಪ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವಂತಹ ಮುಸಬ್ಬ ಪಿ ಬ್ಯಾರಿಯನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಸಲುವಾಗಿ ಕಣ್ಣೂರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಸಮಾರೋಪ ಸಮಾವೇಶದಲ್ಲಿ ಬಹುಮಾನವನ್ನು ವಿತರಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಮಂಗಳೂರು ದೈಹಿಕ ಶಿಕ್ಷಣ ಪರವೀಕ್ಷಕ ಅಧಿಕಾರಿ ಶ್ರೀಯುತ ರವಿಶಂಕರ್, ಹಾಗೂ ಬಜಾಲ್ ನಂತೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ನಿರ್ಮಲ ವಿಲ್ಮಾವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿದರು.

ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಎಸ್ ಉಮರಬ್ಬ , ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸಂಶಾದ, ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಶಾಲಾಕ್ಷಿ ಉಪಸ್ಥಿತರಿದ್ದರು.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅಲ್ತಾಫ್ ಸಾಬ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಕ್ರೀಡೆಯನ್ನು ನಡೆಸಿಕೊಟ್ಟರು.
ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ, ಮತ್ತು ಪಿ.ಯು ಮಹಿಳಾ ಕಾಲೇಜಿನ ಸಂಚಾಲಕರಾದ ರಿಯಾಝ್ ಅಹ್ಮದ್ ಕಣ್ಣೂರು ಸ್ವಾಗತಿಸಿ
ಜೊತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಹಾಜಿ ಸಿತ್ತಾರ್ ವಂದಿಸಿದರು.

ಶಿಕ್ಷಕಿ ವಿಲಿಶಾ ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here