ಎಸ್ ಎಸ್ ಎಲ್ ಸಿ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ: ಮೂರು ಪರೀಕ್ಷೆ ಬರೆದರೂ ಹೆಚ್ಚಿರುವ ಅಂಕ ಪರಿಗಣನೆ

0
104

ಸನ್ಮಾರ್ಗ ವಾರ್ತೆ

2023-24ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1 ರಿಂದ 22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 25 ರಿಂದ ಜೂನ್ 6 ರವರೆಗೆ ಎಸ್ ಎಸ್ ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಕಾಸ ಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ , ”ಈ ವರ್ಷ 8,96,271 ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ” ”6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.

ಮೂರೂ ಪರೀಕ್ಷೆಯಲ್ಲಿನ ಗರಿಷ್ಠ ಅಂಕ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ. ಮೂರೂ ಪರೀಕ್ಷೆ ಬರೆಯವುದು ಕಡ್ಡಾಯವಲ್ಲ. ಯಾವ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆಯುತ್ತಾರೆ ಅದನ್ನು ಮಾತ್ರ ಪರಿಗಣನೆ ತೆಗೆದುಕೊಳ್ಳುತ್ತೇವೆ” ಎಂದು ಮಾಹಿತಿ ನೀಡಿದರು.

“2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ ಎಲ್‌ಸಿ ಪರೀಕ್ಷೆ-2 ಅನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ.

ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡಲಾಗುತ್ತದೆ. ಅಡ್ವೋಕೇಟ್  ಜನರಲ್ ಅವರ ಸಲಹೆ ಪಡೆದು ಹಿಜಾಬ್ ವಿಚಾರ ನಿರ್ಧರಿಸಲಾಗುತ್ತದೆ” ಎಂದಿದ್ದಾರೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ‌ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರಾದ ಮಂಜುಳಾ, ಪದವಿ ಪೂರ್ವ ಶಿಕ್ಷಣ‌ ಇಲಾಖೆ ನಿರ್ದೇಶಕರಾದ ಸಿಂಧೂ ಬಿ ರೂಪೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.